Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:3 - ಕನ್ನಡ ಸಮಕಾಲಿಕ ಅನುವಾದ

3 ಸ್ವಲ್ಪ ಕಾಲದ ತರುವಾಯ, ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು, ಯೆಹೋವ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕ್ರಮೇಣ ಕಾಯಿನನು ತಾನು ಬೆಳೆಸಿದ ಫಸಲಲ್ಲಿ ಕೆಲವನ್ನು ತಂದು ಸರ್ವೇಶ್ವರ ಸ್ವಾಮಿಗೆ ಕಾಣಿಕೆಯಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸ್ವಲ್ಪ ಕಾಲದ ನಂತರ ಕಾಯಿನನು ದೇವರಿಗೆ ಕೃತಜ್ಞತಾ ಕಾಣಿಕೆಯನ್ನು ತಂದನು. ಕಾಯಿನನು ತಾನು ಹೊಲದಲ್ಲಿ ಬೆಳೆದ ಕೆಲವು ಆಹಾರಪದಾರ್ಥಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:3
7 ತಿಳಿವುಗಳ ಹೋಲಿಕೆ  

“ಜನರು ಯೆಹೋವ ದೇವರಿಗೆ ಸಮರ್ಪಿಸುವ ಪ್ರಥಮ ಫಲಗಳನ್ನು ಅಂದರೆ ಎಲ್ಲಾ ಉತ್ತಮವಾದ ಎಣ್ಣೆಯೂ ಉತ್ತಮವಾದ ಹೊಸ ದ್ರಾಕ್ಷಾರಸ, ಧಾನ್ಯವೂ ನಿನಗೆ ಕೊಟ್ಟಿದ್ದೇನೆ.


ಸ್ವಲ್ಪ ಕಾಲವಾದ ಮೇಲೆ ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.


ಆದರೆ ಇವೆಲ್ಲಾ ಸಂಭವಿಸುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆ. ತರುವಾಯ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು,


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು.


ಹೇಬೆಲನು ಸಹ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನೂ ಅವುಗಳ ಕೊಬ್ಬನ್ನೂ ತಂದನು. ಯೆಹೋವ ದೇವರು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು