Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:1 - ಕನ್ನಡ ಸಮಕಾಲಿಕ ಅನುವಾದ

1 ಕೆಲವು ಸಮಯದ ನಂತರ ಈಜಿಪ್ಟಿನ ಅರಸನ ಪಾನದಾಯಕನೂ, ರೊಟ್ಟಿಗಾರನೂ ತಮ್ಮ ಅರಸನಿಗೆ ಎದುರಾಗಿ ಅಪರಾಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈ ಘಟನೆಗಳಾದ ಬಳಿಕ ಈಜಿಪ್ಟಿನ ಅರಸನಾದ ಫರೋಹನ ಮುಖ್ಯಪಾನದಾಯಕ ಮತ್ತು ಮುಖ್ಯ ಅಡಿಗೆಭಟ್ಟ ಯಾವುದೋ ವಿಷಯದಲ್ಲಿ ತಮ್ಮ ದಣಿಗೆ ದ್ರೋಹಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಕ ಕೊಡುವವನೂ ಭಕ್ಷ್ಯಗಳನ್ನು ಮಾಡಿಕೊಡುವವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತೊಬ್ಬನು ಪಾನದಾಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:1
10 ತಿಳಿವುಗಳ ಹೋಲಿಕೆ  

ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಗೌರವಿಸಿ, ತಿರುಗಿ ನಿನ್ನ ಕೆಲಸದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವೆ.


ಆ ರಾತ್ರಿ ಅರಸನಿಗೆ ನಿದ್ರೆ ಬರಲಿಲ್ಲ. ಆದ್ದರಿಂದ ಅರಸನು ಇತಿಹಾಸ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತೆಗೆದುಕೊಂಡು ಬರಲು ಹೇಳಿದನು.


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ, ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿಕೊಂಡು,


ಅವರಿಬ್ಬರಿಗೂ ಅಂದರೆ, ಈಜಿಪ್ಟ್ ದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ರೊಟ್ಟಿಗಾರನಿಗೂ ಒಂದೇ ರಾತ್ರಿ ಕನಸು ಬಿತ್ತು. ಅವರವರ ಕನಸಿಗೆ ಅದರದೇ ಆದ ಅರ್ಥವಿತ್ತು.


ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ, ನಾನು ಆ ದ್ರಾಕ್ಷಿಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ, ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು,” ಎಂದನು.


ಯೋಸೇಫನು ಒಳ್ಳೆಯ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ತಿಳಿದಾಗ, ಅವನು ಯೋಸೇಫನಿಗೆ, “ನನ್ನ ಕನಸಿನಲ್ಲಿಯೂ ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.


ಆಗ ಪಾನದಾಯಕರ ಮುಖ್ಯಸ್ಥನು ಫರೋಹನಿಗೆ, “ಈ ಹೊತ್ತು ನನ್ನ ತಪ್ಪನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು