Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:11 - ಕನ್ನಡ ಸಮಕಾಲಿಕ ಅನುವಾದ

11 ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ, ನಾನು ಆ ದ್ರಾಕ್ಷಿಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ, ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ಆ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಫರೋಹನ ಪಾನಪಾತ್ರೆ ನನ್ನ ಕೈಯಲ್ಲಿತ್ತು. ನಾನು ಆ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆ,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ಆ ಗೊಂಚಲುಗಳನ್ನು ಕೊಯಿದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಫರೋಹನ ಲೋಟವನ್ನು ಹಿಡಿದುಕೊಂಡಿದ್ದರಿಂದ ದ್ರಾಕ್ಷಿಹಣ್ಣುಗಳನ್ನು ತೆಗೆದುಕೊಂಡು ಲೋಟದೊಳಗೆ ರಸಹಿಂಡಿ ಲೋಟವನ್ನು ಫರೋಹನಿಗೆ ಕೊಟ್ಟೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:11
11 ತಿಳಿವುಗಳ ಹೋಲಿಕೆ  

ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು; ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು.


“ನೀನು ಸಾಯದಂತೆ ದೇವದರ್ಶನದ ಗುಡಾರಕ್ಕೆ ಬರುವಾಗ ನೀನೂ ಇಲ್ಲವೆ ನಿನ್ನ ಪುತ್ರರೂ ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿಯಬಾರದು. ಇದು ನಿಮ್ಮ ವಂಶಾವಳಿಯು ಇರುವವರೆಗೂ ಶಾಶ್ವತವಾಗಿರುವ ಕಟ್ಟಳೆಯಾಗಿದೆ.


ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು. ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು. ದ್ರಾಕ್ಷಾರಸದಲ್ಲಿ ತನ್ನ ಬಟ್ಟೆ ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.


ಮುಖ್ಯ ಪಾನದಾಯಕನನ್ನು ತಿರುಗಿ ಉದ್ಯೋಗದಲ್ಲಿ ಇರಿಸಿದ್ದರಿಂದ, ಮತ್ತೆ ಅವನು ಫರೋಹನ ಕೈಗೆ ಪಾನಪಾತ್ರೆಯನ್ನು ಕೊಟ್ಟನು.


ಕೆಲವು ಸಮಯದ ನಂತರ ಈಜಿಪ್ಟಿನ ಅರಸನ ಪಾನದಾಯಕನೂ, ರೊಟ್ಟಿಗಾರನೂ ತಮ್ಮ ಅರಸನಿಗೆ ಎದುರಾಗಿ ಅಪರಾಧ ಮಾಡಿದರು.


ಆ ದ್ರಾಕ್ಷಿಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ, ಹೂವು ಅರಳಿ, ಅದರ ಗೊಂಚಲುಗಳು ಹಣ್ಣಾದವು.


ಅದಕ್ಕೆ ಯೋಸೇಫನು, “ಅದರ ಅರ್ಥ ಏನೆಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು