Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಪಿಸಿಕೊಂಡು, ನನಗೆ ದಯೆತೋರಿಸಿ, ಫರೋಹನ ಮುಂದೆ ನನ್ನ ವಿಷಯ ತಿಳಿಸಿ, ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರುವಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಮರೆಯದೆ ನನಗೊಂದು ಉಪಕಾರ ಮಾಡು. ಫರೋಹನಿಗೆ ನನ್ನ ವಿಷಯ ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡುಗಡೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ಉಪಕಾರ ಮಾಡಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:14
9 ತಿಳಿವುಗಳ ಹೋಲಿಕೆ  

“ಈಗ ನೀವು ನನಗೊಂದು ಪ್ರಮಾಣಮಾಡಬೇಕು. ನಾನು ನಿಮಗೆ ದಯೆ ತೋರಿಸಿದ್ದರಿಂದ ನೀವು ನನಗೂ ನನ್ನ ತಂದೆಯ ಮನೆಗೂ ದಯೆ ತೋರಿಸಬೇಕು. ನನಗೆ ನಿಶ್ಚಯವಾದ ಗುರುತನ್ನು ಕೊಡಬೇಕು.


ಬಳಿಕ ಅವನು, “ಯೇಸುವೇ, ನೀವು ನಿಮ್ಮ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪುಮಾಡಿಕೊಳ್ಳಿರಿ,” ಎಂದನು.


“ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ದಯೆತೋರಿಸು. ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಏಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದಕ್ಕೆ ಚಿಂತೆ ಮಾಡಬೇಡ. ಆದರೆ ಬಿಡುಗಡೆಯಾಗುವುದಕ್ಕೆ ನೀನು ಶಕ್ತನಾದರೆ ಅದನ್ನೇ ಮಾಡು.


ದಾವೀದನು, “ಸೌಲನ ಕುಟುಂಬದಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆ ತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ?” ಎಂದು ಕೇಳಿದನು.


ನೀನು ಸುಮ್ಮನೆ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿಗೆ ಮುಯ್ಯಿ ತೀರಿಸಿಕೊಂಡದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆದರೆ ನನ್ನ ಒಡೆಯನನ್ನು ಯೆಹೋವ ದೇವರು ಚೆನ್ನಾಗಿ ನಡೆಸಿದಾಗ, ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು,” ಎಂದಳು.


ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಗೌರವಿಸಿ, ತಿರುಗಿ ನಿನ್ನ ಕೆಲಸದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವೆ.


ಆಗ ಪಾನದಾಯಕರ ಮುಖ್ಯಸ್ಥನು ಫರೋಹನಿಗೆ, “ಈ ಹೊತ್ತು ನನ್ನ ತಪ್ಪನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು