Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:15 - ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:15
19 ತಿಳಿವುಗಳ ಹೋಲಿಕೆ  

ಆಗ ಯೋಸೇಫನ ಯಜಮಾನನು ಅವನನ್ನು ಹಿಡಿದುಕೊಂಡು, ರಾಜನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.


ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.


ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.


ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.


ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.


ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.


“ಒಬ್ಬನು ಮತ್ತೊಬ್ಬನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ, ಇಲ್ಲವೆ ಅವನು ಬಂಧನಕ್ಕೊಳಗಾದಾಗ ಅಪಹರಿಸಲಾದವನು ಅವನೊಂದಿಗಿದ್ದರೆ, ಅವನನ್ನು ಮರಣದಂಡನೆಗೆ ಗುರಿಮಾಡಬೇಕು.


ಮೈಗಾವಲಿನ ದಳಪತಿಗೆ ಸೇವಕನಾಗಿದ್ದ ಹಿಬ್ರಿಯ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ, ಅವನು ನಮ್ಮ ನಮ್ಮ ಕನಸಿನ ಅರ್ಥವನ್ನು ಹೇಳಿದನು.


ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.


ಯೋಸೇಫನು ಒಳ್ಳೆಯ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ತಿಳಿದಾಗ, ಅವನು ಯೋಸೇಫನಿಗೆ, “ನನ್ನ ಕನಸಿನಲ್ಲಿಯೂ ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.


ಸಂಕೋಲೆಗಳಿಂದ ಅವನ ಕಾಲನ್ನು ನೋಯಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಇರಿಸಿದರು.


ದುಷ್ಟರೂ, ವಂಚಕರೂ ತಮ್ಮ ಬಾಯಿಯನ್ನು ನನಗೆ ವಿರೋಧವಾಗಿ ತೆರೆದಿದ್ದಾರೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು