Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ, ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಫರೋಹನು ಆ ಇಬ್ಬರು ನೌಕರರ ಮೇಲೆ, ಅಂದರೆ ಪಾನಸೇವಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆಭಟ್ಟರ ಮುಖ್ಯಸ್ಥನ ಮೇಲೆಯೂ ಕೋಪಗೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಮ್ಮ ದಣಿಗೆ ವಿರೋಧವಾಗಿ ಯಾವದೋ ತಪ್ಪುಮಾಡಿದ್ದರಿಂದ ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಭಕ್ಷ್ಯಕಾರರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಫರೋಹನು ತನ್ನ ಭಕ್ಷ್ಯಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:2
11 ತಿಳಿವುಗಳ ಹೋಲಿಕೆ  

ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.


ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


ಕ್ರೋಧವು ಕ್ರೂರ, ಕೋಪವು ಪ್ರವಾಹ; ಆದರೆ ಅಸೂಯೆದ ಮುಂದೆ ಯಾವನು ನಿಂತಾನು?


ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು.


ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ರಾಮಾ ಊರಿನ ಶಿಮ್ಮೀ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳುತ್ತಿದ್ದನು. ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ ಜವಾಬ್ದಾರಿಯಾಗಿದ್ದನು.


ಕೆಲವು ಸಮಯದ ನಂತರ ಈಜಿಪ್ಟಿನ ಅರಸನ ಪಾನದಾಯಕನೂ, ರೊಟ್ಟಿಗಾರನೂ ತಮ್ಮ ಅರಸನಿಗೆ ಎದುರಾಗಿ ಅಪರಾಧ ಮಾಡಿದರು.


ಮುಖ್ಯ ಪಾನದಾಯಕನನ್ನು ತಿರುಗಿ ಉದ್ಯೋಗದಲ್ಲಿ ಇರಿಸಿದ್ದರಿಂದ, ಮತ್ತೆ ಅವನು ಫರೋಹನ ಕೈಗೆ ಪಾನಪಾತ್ರೆಯನ್ನು ಕೊಟ್ಟನು.


ಆದರೂ ಪಾನದಾಯಕರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.


ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ, ನನ್ನನ್ನೂ, ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ದಳಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು