Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:20 - ಕನ್ನಡ ಸಮಕಾಲಿಕ ಅನುವಾದ

20 ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೂ ಔತಣವನ್ನು ಮಾಡಿಸಿ, ಮುಖ್ಯ ಪಾನದಾಯಕನನ್ನು ಮತ್ತು ಮುಖ್ಯ ರೊಟ್ಟಿಗಾರನನ್ನು ತನ್ನ ಅಧಿಕಾರಿಗಳ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೂರನೆಯ ದಿನ ಫರೋಹನು ಹುಟ್ಟಿದ ಹಬ್ಬದಿನವಾಗಿತ್ತು. ಅವನು ತನ್ನ ಪರಿವಾರದವರಿಗೆಲ್ಲ ಔತಣವನ್ನು ಏರ್ಪಡಿಸಿದ್ದ. ಮುಖ್ಯ ಪಾನಸೇವಕನನ್ನೂ ಮುಖ್ಯ ಅಡಿಗೆಭಟ್ಟನನ್ನೂ ಬಿಡಿಸಿ ಬರಮಾಡಿದ, ತನ್ನ ಪರಿವಾರದವರ ಮಧ್ಯದಲ್ಲೆ ಅವರ ತಲೆಯನ್ನು ಎತ್ತಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯಭಕ್ಷ್ಯಕಾರನನ್ನೂ ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ಷ್ಯಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:20
14 ತಿಳಿವುಗಳ ಹೋಲಿಕೆ  

ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು.


ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.


ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಗೌರವಿಸಿ, ತಿರುಗಿ ನಿನ್ನ ಕೆಲಸದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವೆ.


ಕೊನೆಗೆ ಅನುಕೂಲವಾದ ಸಮಯ ಸಿಕ್ಕಿತು. ತನ್ನ ಜನ್ಮ ದಿನದಂದು ಹೆರೋದನು ತನ್ನ ಉನ್ನತ ಅಧಿಕಾರಿಗಳಿಗೆ, ಸೇನಾಧಿಪತಿಗಳಿಗೆ ಹಾಗೂ ಗಲಿಲಾಯದ ಪ್ರಮುಖರಿಗೆ ಔತಣವನ್ನು ಏರ್ಪಡಿಸಿದನು.


ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.


“ಬಹುಕಾಲವಾದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ಕೇಳಿದನು.


ಆಮೇಲೆ ಯೋಬನು ತನ್ನ ಬಾಯಿತೆರೆದು, ತನ್ನ ಜನ್ಮ ದಿವಸವನ್ನು ಶಪಿಸಿದನು.


ತನ್ನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಸಮಸ್ತ ಶ್ರೇಷ್ಠರಿಗೂ ಅಧಿಕಾರಿಗಳಿಗೂ ಔತಣವನ್ನು ಮಾಡಿಸಿದನು. ಪಾರಸಿಯ ಮತ್ತು ಮೇದ್ಯ ದೇಶಗಳ ಸೇನಾಧಿಪತಿಗಳೂ ಪ್ರಾಂತಗಳ ಶ್ರೇಷ್ಠರೂ ಪ್ರಧಾನರೂ ಉಪಸ್ಥಿತರಿದ್ದರು.


ಇಸಾಕನು ಬೆಳೆದು ಬಾಲಕನಾಗಿ ತಾಯಿಯ ಹಾಲು ಕುಡಿಯುವುದನ್ನು ಬಿಟ್ಟನು. ಆ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣ ಮಾಡಿಸಿದನು.


ಯೆಹೋವ ದೇವರ ಮುಂತಿಳಿಸಿದ ವಾಕ್ಯವು ನೆರವೇರುವವರೆಗೆ ಅವನು ದೇವರ ಮಾತಿನಿಂದ ಪರಿಶೋಧಿತನಾದನು.


ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿವಸದಲ್ಲಿ ಆದದ್ದೇನೆಂದರೆ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.


ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು, ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ತನ್ನ ಸೇವಕರಿಗೆ ಔತಣವನ್ನು ಏರ್ಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು