ಆದಿಕಾಂಡ 40:8 - ಕನ್ನಡ ಸಮಕಾಲಿಕ ಅನುವಾದ8 ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಅವನಿಗೆ - ನಮಗೆ ಸ್ವಪ್ನಬಿತ್ತು; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ ಎಂದು ಹೇಳಲು ಯೋಸೇಫನು ಅವರಿಗೆ - ಸ್ವಪ್ನಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ; ದಯಮಾಡಿ ನಿಮ್ಮ ಸ್ವಪ್ನವನ್ನು ನನಗೆ ತಿಳಿಸಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.