Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಫರೋಹನು ಯೋಸೇಫನನ್ನು ಕರೆತರುವಂತೆ ಸೇವಕರನ್ನು ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಕೇಳಿದ ಫರೋಹನು ಜೋಸೆಫನನ್ನು ಕರೆತರುವಂತೆ ಆಳುಗಳನ್ನು ಕಳಿಸಿದ. ಅವರು ಬಂದು ಅವನನ್ನು ಸೆರೆಯಿಂದ ತ್ವರೆಯಾಗಿ ಬಿಡುಗಡೆ ಮಾಡಿದರು. ಜೋಸೆಫನು ಕ್ಷೌರಮಾಡಿಕೊಂಡು, ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಯಲ್ಲಿ ಹಾಜರಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಫರೋಹನು ಇದನ್ನು ಕೇಳಿ ಯೋಸೇಫನನ್ನು ಕರೇ ಕಳುಹಿಸಿದನು. ಯೋಸೇಫನು ಬೇಗನೆ ಸೆರೆಮನೆಯಿಂದ ಬಿಡಿಸಲ್ಪಟ್ಟವನಾಗಿ ಕ್ಷೌರಮಾಡಿಸಿಕೊಂಡು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಫರೋಹನ ಸನ್ನಿಧಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:14
13 ತಿಳಿವುಗಳ ಹೋಲಿಕೆ  

ಅರ್ಯೋಕನು ದಾನಿಯೇಲನನ್ನು ತ್ವರೆಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ, ಆತನಿಗೆ, “ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನುಷ್ಯನು ಸಿಕ್ಕಿದ್ದಾನೆ. ಅವನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತಾನೆ,” ಎಂದನು.


ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ, “ನಾನು ನಿಮ್ಮ ದೇವರಾದ ಯೆಹೋವ ದೇವರಿಗೂ, ನಿಮಗೂ ವಿರೋಧವಾಗಿ ಪಾಪಮಾಡಿದ್ದೇನೆ.


ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.


ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು