ಆದಿಕಾಂಡ 41:25 - ಕನ್ನಡ ಸಮಕಾಲಿಕ ಅನುವಾದ25 ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಜೋಸೆಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳ ವಿಷಯ ಒಂದೇ. ದೇವರು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೋಸೇಫನು ಫರೋಹನಿಗೆ - ತಾವು ಕಂಡ ಎರಡು ಕನಸುಗಳೂ ಒಂದೇ ವಿಷಯವಾದವುಗಳು. ದೇವರು ತಾನು ಮಾಡಬೇಕೆಂದಿರುವದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಯೋಸೇಫನು ಫರೋಹನಿಗೆ, “ಆ ಎರಡು ಕನಸುಗಳ ಅರ್ಥವು ಒಂದೇ. ಮುಂದೆ ನಡೆಯಲಿರುವುದನ್ನು ದೇವರು ತಮಗೆ ತಿಳಿಸಿದ್ದಾನೆ. ಅಧ್ಯಾಯವನ್ನು ನೋಡಿ |