ಆದಿಕಾಂಡ 41:27 - ಕನ್ನಡ ಸಮಕಾಲಿಕ ಅನುವಾದ27 ಅವುಗಳ ತರುವಾಯ ಏರಿ ಬಂದ ಬಡಕಲಾದ ಕೆಟ್ಟ ಏಳು ಹಸುಗಳು ಮತ್ತು ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು, ಬರಲಿರುವ ಏಳು ವರ್ಷಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಒಳ್ಳೆಯ ಹಸುಗಳ ಹಿಂದೆ ಬಂದ ಒಣಕಲಾಗಿದ್ದ ಆ ಏಳು ಬಡಹಸುಗಳು ಮತ್ತು ಮೂಡಣ ಗಾಳಿಯಿಂದ ಕೆಟ್ಟುಹೋಗಿದ್ದ ಆ ಏಳು ಕಾಳಿಲ್ಲದ ತೆನೆಗಳು ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಒಳ್ಳೇ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಆ ಬಡ ಆಕಳುಗಳೂ ಮೂಡಣ ಗಾಳಿಯಿಂದ ಕೆಟ್ಟುಹೋಗಿದ್ದ ಆ ಏಳು ಕಾಳಿಲ್ಲದ ತೆನೆಗಳೂ ಬರವುಂಟಾಗುವ ಏಳು ವರುಷಗಳನ್ನು ಸೂಚಿಸುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಈ ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ. ಅಧ್ಯಾಯವನ್ನು ನೋಡಿ |