Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:33 - ಕನ್ನಡ ಸಮಕಾಲಿಕ ಅನುವಾದ

33 “ಹೀಗಿರುವುದರಿಂದ ಈಗ ಫರೋಹನು ವಿವೇಕಿಯಾದ ಬುದ್ಧಿಯುಳ್ಳ ಒಬ್ಬನನ್ನು ನೋಡಿ, ಅವನನ್ನು ಈಜಿಪ್ಟ್ ದೇಶದ ಮೇಲೆ ನೇಮಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಆದುದರಿಂದ ತಾವು ವಿವೇಕಿಯೂ ಬುದ್ಧಿವಂತನೂ ಆದ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಧಿಕಾರಿಯನ್ನಾಗಿ ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದದರಿಂದ ತಾವು ವಿವೇಕಿಯೂ ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ನೇವಿುಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:33
6 ತಿಳಿವುಗಳ ಹೋಲಿಕೆ  

ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.


ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಆದ್ದರಿಂದ ನೀವು ಪ್ರತಿಯೊಂದು ಗೋತ್ರದಿಂದ ಜ್ಞಾನಿಗಳೂ ವಿವೇಕಿಗಳೂ ಪ್ರಖ್ಯಾತರೂ ಆದ ವ್ಯಕ್ತಿಗಳನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳಾಗಿ ನೇಮಿಸುತ್ತೇನೆ,” ಎಂದು ಹೇಳಿದೆನು.


ಫರೋಹನು ಅಧಿಕಾರಿಗಳನ್ನು ನೇಮಿಸಿ, ದೇಶದ ಮೇಲಿಟ್ಟು, ಸುಭಿಕ್ಷದ ಏಳು ವರ್ಷಗಳಲ್ಲಿ ಈಜಿಪ್ಟ್ ದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ಕಂದಾಯವಾಗಿ ತೆಗೆದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು