ಆದಿಕಾಂಡ 41:34 - ಕನ್ನಡ ಸಮಕಾಲಿಕ ಅನುವಾದ34 ಫರೋಹನು ಅಧಿಕಾರಿಗಳನ್ನು ನೇಮಿಸಿ, ದೇಶದ ಮೇಲಿಟ್ಟು, ಸುಭಿಕ್ಷದ ಏಳು ವರ್ಷಗಳಲ್ಲಿ ಈಜಿಪ್ಟ್ ದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ಕಂದಾಯವಾಗಿ ತೆಗೆದುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅದೂ ಅಲ್ಲದೆ, ದೇಶದ ಎಲ್ಲ ಭಾಗಗಳಲ್ಲೂ ಗುಮಾಸ್ತರನ್ನು ನೇಮಿಸಿ ಅವರ ಮೂಲಕ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯಲ್ಲಿ ಐದನೆಯ ಒಂದು ಪಾಲನ್ನು ಕಂದಾಯವಾಗಿ ಎತ್ತಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಮತ್ತು ತಾವು ಒಂದು ಕೆಲಸ ಮಾಡಬೇಕು; ದೇಶದ ಎಲ್ಲಾ ಭಾಗಗಳಲ್ಲಿಯೂ ಕರಣೀಕರನ್ನು ನೇವಿುಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರುಷಗಳಲ್ಲಿ ದೇಶದ ಬೆಳೆಯೊಳಗೆ ಐದನೆಯ ಪಾಲನ್ನು ಕಂದಾಯವಾಗಿ ಎತ್ತಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅಲ್ಲದೆ ಜನರಿಂದ ಆಹಾರವನ್ನು ಶೇಖರಿಸುವುದಕ್ಕಾಗಿ ತಾವು ಸಂಗ್ರಹಕರನ್ನು ನೇಮಿಸಿ ಒಳ್ಳೆಯ ಏಳು ವರ್ಷಗಳಲ್ಲಿ ಪ್ರತಿಯೊಬ್ಬ ಬೆಳೆಗಾರನಿಂದಲೂ ಬೆಳೆಯ ಐದನೆ ಒಂದು ಭಾಗವನ್ನು ಕಂದಾಯ ರೂಪದಲ್ಲಿ ವಸೂಲಿ ಮಾಡಬೇಕು. ಅಧ್ಯಾಯವನ್ನು ನೋಡಿ |