Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:39 - ಕನ್ನಡ ಸಮಕಾಲಿಕ ಅನುವಾದ

39 ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಈತನಿಗಿಂತ ಯೋಗ್ಯವಾದ ವ್ಯಕ್ತಿ ನಮಗೆ ಸಿಕ್ಕುವುದು ಸಾಧ್ಯವೆ?” ಎಂದು ಹೇಳಿ ಜೋಸೆಫನಿಗೆ, “ದೇವರೇ ನಿನಗೆ ಇದನ್ನೆಲ್ಲ ತಿಳಿಸಿರುವುದರಿಂದ ನಿನಗೆ ಸಮಾನವಾದ ಬುದ್ಧಿವಿವೇಕಗಳುಳ್ಳ ವ್ಯಕ್ತಿ ಯಾವನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಈತನಿಗಿಂತ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೇ ಎಂದು ಹೇಳಿ ಯೋಸೇಫನಿಗೆ - ದೇವರು ಇದನ್ನೆಲ್ಲಾ ನಿನಗೇ ತಿಳಿಸಿರುವದರಿಂದ ನಿನಗೆ ಸಮಾನನಾದ ಬುದ್ಧಿ ವಿವೇಕಗಳುಳ್ಳ ಪುರುಷನು ಯಾವನೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಫರೋಹನು ಯೋಸೇಫನಿಗೆ, “ದೇವರು ನಿನಗೆ ಈ ಎಲ್ಲಾ ವಿಷಯಗಳನ್ನು ತೋರಿಸಿರುವುದರಿಂದ ನಿನಗಿಂತ ಬುದ್ಧಿವಂತನೂ ವಿವೇಕಿಯೂ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:39
9 ತಿಳಿವುಗಳ ಹೋಲಿಕೆ  

“ಹೀಗಿರುವುದರಿಂದ ಈಗ ಫರೋಹನು ವಿವೇಕಿಯಾದ ಬುದ್ಧಿಯುಳ್ಳ ಒಬ್ಬನನ್ನು ನೋಡಿ, ಅವನನ್ನು ಈಜಿಪ್ಟ್ ದೇಶದ ಮೇಲೆ ನೇಮಿಸಲಿ.


“ನಾನು ಫರೋಹನಿಗೆ ಹೇಳಿದ ಮಾತಿನಂತೆ ದೇವರು ಮಾಡಲಿರುವುದನ್ನು ಫರೋಹನಿಗೆ ತೋರಿಸಿದ್ದಾರೆ.


ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.


ಯೋಸೇಫನು ಫರೋಹನಿಗೆ ಉತ್ತರವಾಗಿ, “ಅದನ್ನು ನಾನು ಹೇಳಲಾರೆ, ಆದರೆ ದೇವರು ಫರೋಹನಿಗೆ ಮೆಚ್ಚಿಕೆಯಾದ ಉತ್ತರವನ್ನು ಕೊಡುವರು,” ಎಂದನು.


ಚೋವನ್ ಪಟ್ಟಣದ ಅಧಿಪತಿಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿದೆ. ನೀವು ಫರೋಹನನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ಶಿಷ್ಯನೆಂದು ಹೇಳುವುದು ಹೇಗೆ”?


ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”


ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.


“ಎಜ್ರನೇ, ನಿನ್ನಲ್ಲಿರುವ ನಿನ್ನ ದೇವರ ಜ್ಞಾನಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ, ದಂಡಾಧಿಕಾರಿಯನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಾಯೇಲರಲ್ಲಿ, ನಿನ್ನ ದೇವರ ನಿಯಮಗಳನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀನು ಅದನ್ನು ಕಲಿಸಬೇಕು.


ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು