Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:41 - ಕನ್ನಡ ಸಮಕಾಲಿಕ ಅನುವಾದ

41 ಇದಲ್ಲದೆ ಫರೋಹನು ಯೋಸೇಫನಿಗೆ, “ನೋಡು, ನಾನು ನಿನ್ನನ್ನು ಈಜಿಪ್ಟ್ ದೇಶದ ಮೇಲೆಲ್ಲಾ ನೇಮಿಸಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಬಳಿಕ ಫರೋಹನು ಜೋಸೆಫನಿಗೆ, “ಇದೀಗಲೆ ಈಜಿಪ್ಟ್ ದೇಶದ ಮೇಲೆಲ್ಲ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸುತ್ತಿದ್ದೇನೆ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಫರೋಹನು ಯೋಸೇಫನಿಗೆ - ನೋಡು ಐಗುಪ್ತದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ಇಟ್ಟಿದ್ದೇನೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಫರೋಹನು ಯೋಸೇಫನಿಗೆ, “ನಾನು ನಿನ್ನನ್ನು ಈಜಿಪ್ಟ್ ದೇಶಕ್ಕೆಲ್ಲ ರಾಜ್ಯಪಾಲನನ್ನಾಗಿ ನೇಮಿಸುವೆನು” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:41
17 ತಿಳಿವುಗಳ ಹೋಲಿಕೆ  

ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.


ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.


ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.


ನಾಚಿಕೆಪಡಿಸುವ ಮಗನ ಮೇಲೆ ಜಾಣನಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.


ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.


ಇದಲ್ಲದೆ ಫರೋಹನು ಯೋಸೇಫನಿಗೆ, “ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟ್ ದೇಶದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ, ಕಾಲನ್ನಾಗಲಿ ಎತ್ತಬಾರದು,” ಎಂದನು.


ಆದ್ದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸಿದನು.


ಅವನನ್ನು ಮನೆಯಲ್ಲಿಯೂ, ತನಗಿದ್ದ ಎಲ್ಲದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಯೆಹೋವ ದೇವರು ಆ ಈಜಿಪ್ಟಿನವನ ಮನೆಯನ್ನು ಯೋಸೇಫನಿಗಾಗಿ ಆಶೀರ್ವದಿಸಿದರು. ಮನೆಯಲ್ಲಿಯೂ ಹೊಲದಲ್ಲಿಯೂ ಅವನಿಗಿದ್ದ ಎಲ್ಲದರ ಮೇಲೆಯೂ ಯೆಹೋವ ದೇವರ ಆಶೀರ್ವಾದವಿತ್ತು.


ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.


ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ, ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ,


ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.


“ಆದ್ದರಿಂದ ಈಗ ನೀವಲ್ಲ, ದೇವರು ತಾವೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ. ದೇವರು ನನ್ನನ್ನು ಫರೋಹನಿಗೆ ತಂದೆಯಾಗಿಯೂ, ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಈಜಿಪ್ಟ್ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾರೆ.


ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು