ಆದಿಕಾಂಡ 41:45 - ಕನ್ನಡ ಸಮಕಾಲಿಕ ಅನುವಾದ45 ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಬಳಿಕ ಫರೋಹನು ಜೋಸೆಫನಿಗೆ ‘ಸಾಪ್ನತ್ಪನ್ನೇಹ’ ಎಂಬ ಹೊಸ ಹೆಸರಿಟ್ಟನು; ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳು ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ತರುವಾಯ ಜೋಸೆಫನು ಈಜಿಪ್ಟ್ ದೇಶಸಂಚಾರ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಮತ್ತು ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟು ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು. ಅಧ್ಯಾಯವನ್ನು ನೋಡಿ |