ಆದಿಕಾಂಡ 41:46 - ಕನ್ನಡ ಸಮಕಾಲಿಕ ಅನುವಾದ46 ಯೋಸೇಫನು ಈಜಿಪ್ಟಿನ ಅರಸನಾದ ಫರೋಹನ ಮುಂದೆ ನಿಂತಾಗ, ಮೂವತ್ತು ವರ್ಷದವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು, ಈಜಿಪ್ಟ್ ದೇಶದಲ್ಲೆಲ್ಲಾ ಸಂಚಾರಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಈಜಿಪ್ಟ್ ದೇಶದ ಅರಸನಾದ ಫರೋಹನ ಆಸ್ಥಾನವನ್ನು ಸೇರಿದಾಗ ಜೋಸೆಫನಿಗೆ ಮೂವತ್ತು ವರ್ಷ ವಯಸ್ಸು. ಜೋಸೆಫನು ಫರೋಹನ ಸನ್ನಿಧಿಯಿಂದ ಹೊರಟು ಈಜಿಪ್ಟ್ ದೇಶದಲ್ಲೆಲ್ಲ ಸಂಚಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಯೋಸೇಫನು ಐಗುಪ್ತದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರುಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚಾರ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಯೋಸೇಫನು ಈಜಿಪ್ಟ್ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು. ಅಧ್ಯಾಯವನ್ನು ನೋಡಿ |
ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.