ಆದಿಕಾಂಡ 41:49 - ಕನ್ನಡ ಸಮಕಾಲಿಕ ಅನುವಾದ49 ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕಮಾಡುವುದಕ್ಕೆ ಆಗದೆ ಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಹೀಗೆ ಕೂಡಿಸಿದ ದವಸಧಾನ್ಯ ಸಮುದ್ರದ ಮರಳಿನಂತೆ ರಾಶಿರಾಶಿಯಾಗಿತ್ತು. ಲೆಕ್ಕಮಾಡುವುದಕ್ಕೂ ಆಗದೆ ಲೆಕ್ಕ ಇಡುವುದನ್ನೇ ಬಿಟ್ಟುಬಿಡಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಅವನು ದವಸಧಾನ್ಯವನ್ನು ಸಮುದ್ರದ ಉಸಬಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟು ಬಿಟ್ಟನು; ಅದನ್ನು ಲೆಕ್ಕ ಮಾಡುವದಕ್ಕೆ ಆಗದೆಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಯೋಸೇಫನು ಬಹಳ ದವಸಧಾನ್ಯಗಳನ್ನು ಸಂಗ್ರಹಿಸಿದ್ದರಿಂದ ಸಮುದ್ರದ ಮರಳಿನ ರಾಶಿಯೆಂಬಂತೆ ತೋರಿತು; ಲೆಕ್ಕಿಸುವುದಕ್ಕೂ ಅಸಾಧ್ಯವಾಯಿತು. ಅಧ್ಯಾಯವನ್ನು ನೋಡಿ |