Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:52 - ಕನ್ನಡ ಸಮಕಾಲಿಕ ಅನುವಾದ

52 ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಎರಡನೆಯ ಮಗನು ಹುಟ್ಟಿದಾಗ, ಯಾವ ದೇಶದಲ್ಲಿ ನನಗೆ ಸಂಕಷ್ಟವಿತ್ತೋ ಆ ದೇಶದಲ್ಲಿ ದೇವರು ನನಗೆ ಸಮೃದ್ಧಿಯನ್ನು ದಯಪಾಲಿಸಿದ್ದಾರೆ!” ಎಂದು ಆ ಮಗನಿಗೆ ‘ಎಫ್ರಾಯೀಮ್’ ಎಂದು ನಾಮಕರಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಎರಡನೆಯ ಮಗನು ಹುಟ್ಟಿದಾಗ ಅವನು - ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆಂದು ಹೇಳಿ ಆ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, “ಎಫ್ರಾಯೀಮ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:52
21 ತಿಳಿವುಗಳ ಹೋಲಿಕೆ  

“ಯೋಸೇಫನು ಫಲಭರಿತವಾದ ದ್ರಾಕ್ಷಿಬಳ್ಳಿ ಕಾಲುವೆಗಳ ಬಳಿಯಲ್ಲಿರುವ ಫಲಭರಿತ ದ್ರಾಕ್ಷಿಬಳ್ಳಿ, ಅದರ ಕೊಂಬೆಗಳು ಗೋಡೆಗಳನ್ನೇರುತ್ತವೆ.


ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.


ನಿನ್ನಿಂದ ಅನೇಕ ಜನಾಂಗಗಳೂ ಅರಸರೂ ಹುಟ್ಟುವರು.


ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.


ನೀವು ತುಂಬಿದ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತೀರಿ, ಶ್ರೇಷ್ಠವಾದ ಎಣ್ಣೆಗಳಿಂದ ನಿಮ್ಮನ್ನು ಅಭಿಷೇಕಿಸಿಕೊಳ್ಳುತ್ತೀರಿ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನ ಪಡುವುದಿಲ್ಲ.


ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.


ಜೇಷ್ಠಪುತ್ರನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಏಕೆಂದರೆ ಅವನು, “ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನು ಮರೆತುಬಿಡುವಂತೆ ಮಾಡಿದರು,” ಎಂದನು.


ಈಜಿಪ್ಟ್ ದೇಶದಲ್ಲಿದ್ದ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ,


ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು.


ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯೀಮನ ತಲೆಯ ಮೇಲೆಯೂ, ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ, ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.


ಹನ್ನಳು ಗರ್ಭವತಿಯಾಗಿ, ಕಾಲವು ಪೂರ್ತಿಯಾದ ತರುವಾಯ ಮಗನನ್ನು ಹೆತ್ತು, “ನಾನು ಇವನಿಗಾಗಿ ಯೆಹೋವ ದೇವರನ್ನು ಬೇಡಿ ಪಡೆದುಕೊಂಡೆನು,” ಎಂದು ಹೇಳಿ ಅವನಿಗೆ, ಸಮುಯೇಲ ಎಂದು ಹೆಸರಿಟ್ಟಳು.


“ಈಗ ನಾನು ನಿನ್ನ ಬಳಿಗೆ ಈಜಿಪ್ಟಿಗೆ ಬರುವ ಮೊದಲು ಈಜಿಪ್ಟಿನಲ್ಲಿ ನಿನಗೆ ಹುಟ್ಟಿದ ಇಬ್ಬರು ಪುತ್ರರಾದ ಎಫ್ರಾಯೀಮ್ ಮನಸ್ಸೆಯರು ನನ್ನವರಾಗಿರಬೇಕು. ಅವರು ರೂಬೇನ್ ಮತ್ತು ಸಿಮೆಯೋನರಂತೆ ನನ್ನವರಾಗಿರಬೇಕು.


ಕುಟುಂಬಗಳ ಪ್ರಕಾರ ಯೋಸೇಫನ ಪುತ್ರರು: ಮನಸ್ಸೆ, ಎಫ್ರಾಯೀಮ್.


ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು.


ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯೀಮರು ತಮಗೆ ಸೊತ್ತಾಗಿ ತೆಗೆದುಕೊಂಡರು.


ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು