Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:54 - ಕನ್ನಡ ಸಮಕಾಲಿಕ ಅನುವಾದ

54 ಯೋಸೇಫನು ಹೇಳಿದಂತೆ ಬರುವುದಕ್ಕಿದ್ದ ಬರಗಾಲದ ಏಳು ವರ್ಷಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರಗಾಲವಿತ್ತು. ಆದರೆ ಈಜಿಪ್ಟ್ ದೇಶದಲ್ಲೆಲ್ಲಾ ಆಹಾರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಜೋಸೆಫನು ಹೇಳಿದ್ದ ಪ್ರಕಾರವೇ ಕ್ಷಾಮದ ಏಳು ವರ್ಷಗಳು ಪ್ರಾರಂಭವಾದವು. ಬರವು ಸುತ್ತಮುತ್ತಲಿನ ಎಲ್ಲ ದೇಶಗಳಿಗೂ ಹಬ್ಬಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಯೋಸೇಫನು ಹೇಳಿದ್ದ ಪ್ರಕಾರ ಕ್ಷಾಮದ ಏಳು ವರುಷಗಳಿಗೆ ಪ್ರಾರಂಭವಾಯಿತು. ಬರವು ಸುತ್ತಲಿದ್ದ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು; ಐಗುಪ್ತದೇಶದಲ್ಲಿ ಮಾತ್ರ ಆಹಾರ ದೊರಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:54
13 ತಿಳಿವುಗಳ ಹೋಲಿಕೆ  

“ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು.


ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.


ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ.


ಆದರೆ ಅವುಗಳ ಹಿಂದೆ ಏಳು ವರ್ಷಗಳ ಬರಗಾಲ ಬರುತ್ತವೆ. ಆಗ ಈಜಿಪ್ಟಿನಲ್ಲಿದ್ದ ಸುಭಿಕ್ಷವು ಮರೆಯುವಂತಾಗುವುದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವುದು.


ಆದರೆ ಬರವು ಅತಿ ಘೋರವಾಗಿದ್ದದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಈಜಿಪ್ಟ್ ದೇಶವೂ, ಕಾನಾನ್ ದೇಶವೂ ಕ್ಷಾಮದಿಂದ ಕ್ಷೀಣವಾದವು.


ದೇಶದಲ್ಲಿ ಬರವು ಘೋರವಾಗಿತ್ತು.


ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು.


ಅವುಗಳ ತರುವಾಯ ಏರಿ ಬಂದ ಬಡಕಲಾದ ಕೆಟ್ಟ ಏಳು ಹಸುಗಳು ಮತ್ತು ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು, ಬರಲಿರುವ ಏಳು ವರ್ಷಗಳು.


ಈಜಿಪ್ಟ್ ದೇಶದಲ್ಲಿದ್ದ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ,


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ನೀನು, ನಿನ್ನ ಮನೆಯವರು ಎದ್ದು ಎಲ್ಲಿ ಇಳಿದುಕೊಳ್ಳುವ ಸ್ಥಳ ಉಂಟೋ ಅಲ್ಲಿ ಹೋಗಿ ವಾಸಿಸಿರಿ. ಏಕೆಂದರೆ ಯೆಹೋವ ದೇವರು ಬರವನ್ನು ಕಳುಹಿಸಲಿದ್ದಾರೆ. ಅದು ದೇಶದ ಮೇಲೆ ಏಳು ವರ್ಷದವರೆಗೂ ಬರುವುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು