Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:8 - ಕನ್ನಡ ಸಮಕಾಲಿಕ ಅನುವಾದ

8 ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:8
39 ತಿಳಿವುಗಳ ಹೋಲಿಕೆ  

ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.


ಆದರೆ ಈಜಿಪ್ಟಿನ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.


ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.


ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”


ಫರೋಹನು ಜ್ಞಾನಿಗಳನ್ನೂ, ಮಂತ್ರವಾದಿಗಳನ್ನೂ ಕರೆಸಿದನು. ಆಗ ಈಜಿಪ್ಟಿನ ಮಂತ್ರಗಾರರೂ ಸಹ ತಮ್ಮ ಮಾಟಗಳಿಂದ ಹಾಗೆಯೇ ಮಾಡಿದರು.


ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.


ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?


“ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಆದರೆ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿ, ಕಪ್ಪೆಗಳನ್ನು ಈಜಿಪ್ಟ್ ದೇಶದ ಮೇಲೆ ಬರಮಾಡಿದರು.


ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು.


ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ, ಅವರು ಚಿಂತೆಯುಳ್ಳವರಾಗಿದ್ದರು.


ಏಕೆಂದರೆ, ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ಜ್ಞಾನಿಗಳ ಜ್ಞಾನವನ್ನು ನಾನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ನಾನು ನಿರರ್ಥಕ ಮಾಡುವೆನು.”


ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.


ಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು.


ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.


ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ.


“ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”


ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.


ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


“ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ ಈಜಿಪ್ಟಿನವರ ಮೇಲೆಯೂ ಇದ್ದವು.


ಆ ಬತ್ತಿ ಹೋಗಿದ್ದ ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿ ಬಿಟ್ಟವು. ಫರೋಹನು ಎಚ್ಚೆತ್ತಾಗ ಅದು ಕನಸಾಗಿತ್ತು.


ಆಗ ಫರೋಹನು ಯೋಸೇಫನಿಗೆ, “ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ,” ಎಂದನು.


ಫಿಲಿಷ್ಟಿಯರು ಯಾಜಕರನ್ನೂ ಕಣಿಹೇಳುವವರನ್ನೂ ಕರೆದು, “ಯೆಹೋವ ದೇವರ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವುದು ನಮಗೆ ತಿಳಿಸಿರಿ,” ಎಂದರು.


ಆದ್ದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವುದಕ್ಕೋಸ್ಕರ ಬಾಬಿಲೋನಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.


“ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು.


ಆ ಒಣಗಿದ್ದ ಏಳು ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಸಿದಾಗ, ಅದರ ಅರ್ಥವನ್ನು ನನಗೆ ಯಾರೂ ಹೇಳಲಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು