ಆದಿಕಾಂಡ 42:11 - ಕನ್ನಡ ಸಮಕಾಲಿಕ ಅನುವಾದ11 ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾವೆಲ್ಲರು ಒಬ್ಬ ತಂದೆಯ ಮಕ್ಕಳು; ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಅವರು ಅವನಿಗೆ, “ಆ ಮನುಷ್ಯನು ನಮ್ಮ ವಿಷಯದಲ್ಲಿ ಮತ್ತು ನಮ್ಮ ಮನೆಯವರ ವಿಷಯದಲ್ಲಿ ನೇರವಾಗಿ ಕೇಳಿ ಅವನು, ‘ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ?’ ಎಂದು ಕೇಳಿದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ,’ ಎಂದು ಅವನು ನಮಗೆ ಹೇಳುತ್ತಾನೆಂದು ನಮಗೆ ಹೇಗೆ ತಿಳಿಯಲು ಸಾಧ್ಯ?” ಎಂದರು.