ಆದಿಕಾಂಡ 42:16 - ಕನ್ನಡ ಸಮಕಾಲಿಕ ಅನುವಾದ16 ನಿಮ್ಮಲ್ಲಿಂದ ಒಬ್ಬನನ್ನು ಕಳುಹಿಸಿರಿ, ಅವನು ನಿಮ್ಮ ಸಹೋದರನನ್ನು ಕರೆದುಕೊಂಡು ಬರಲಿ. ಆದರೆ ನೀವು ಸೆರೆಮನೆಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ, ಇಲ್ಲವೋ ಎಂದು ನಿಮ್ಮ ಮಾತುಗಳನ್ನು ಪರೀಕ್ಷಿಸುತ್ತೇನೆ. ಇಲ್ಲದಿದ್ದರೆ, ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇರಿಸುತ್ತೇನೆ. ಹೀಗೆ ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಇಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ, ಫರೋಹನ ಜೀವದಾಣೆ, ನೀವು ಗೂಢಚಾರರೇ,” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನನ್ನು ಕರೆದುಕೊಂಡು ಬರುವದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡಿಸುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ, ಫರೋಹನ ಜೀವದಾಣೆ, ನೀವು ಗೂಢಚಾರರೇ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ನಿಮ್ಮಲ್ಲೊಬ್ಬನು ಹಿಂತಿರುಗಿ ಹೋಗಿ ನಿಮ್ಮ ಚಿಕ್ಕ ತಮ್ಮನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು. ಅಲ್ಲಿಯವರೆಗೆ ಉಳಿದವರೆಲ್ಲರೂ ಇಲ್ಲಿ ಸೆರೆಮನೆಯಲ್ಲಿರಬೇಕು. ನೀವು ಹೇಳುತ್ತಿರುವುದು ಸತ್ಯವೋ ಸುಳ್ಳೋ ಆಗ ನನಗೆ ಗೊತ್ತಾಗುವುದು. ಆದರೆ ನೀವಂತೂ ಗೂಢಚಾರರೆಂದು ತಿಳಿದುಕೊಂಡಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |