Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:18 - ಕನ್ನಡ ಸಮಕಾಲಿಕ ಅನುವಾದ

18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:18
12 ತಿಳಿವುಗಳ ಹೋಲಿಕೆ  

ನೀನು ಕಠಿಣವಾಗಿ ಅವನ ಮೇಲೆ ಅಧಿಕಾರ ಚಲಾಯಿಸಬಾರದು. ನಿನ್ನ ದೇವರಿಗೆ ಭಯಪಡಬೇಕು.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


“ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


“ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,


ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.


ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.


ನೀವು ಸತ್ಯವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿತನಾಗಿರಲಿ. ಆದರೆ ನೀವು ಎಲ್ಲರೂ ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.


ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.


ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು