Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:19 - ಕನ್ನಡ ಸಮಕಾಲಿಕ ಅನುವಾದ

19 ನೀವು ಸತ್ಯವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿತನಾಗಿರಲಿ. ಆದರೆ ನೀವು ಎಲ್ಲರೂ ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯವನ್ನು ತೆಗೆದುಕೊಂಡು ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ; ವಿುಕ್ಕಾದವರು ನಿಮ್ಮ ಮನೆಯವರ ಅವಸರಕ್ಕೆ ಧಾನ್ಯವನ್ನು ತೆಗೆದುಕೊಂಡು ಹೋಗಿ ನಿಮ್ಮ ತಮ್ಮನನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಯಥಾರ್ಥವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನನ್ನು ಸೆರೆಮನೆಯಲ್ಲಿಡುತ್ತೇನೆ; ಉಳಿದವರು ನಿಮ್ಮ ಜನರಿಗಾಗಿ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:19
13 ತಿಳಿವುಗಳ ಹೋಲಿಕೆ  

ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.


ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆ ಹೋಗಿದ್ದಾರೆ. ಅವರೆಲ್ಲರೂ ಹಳ್ಳಕೊಳ್ಳಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಸೆರೆಮನೆಗಳಲ್ಲಿ ಬಂಧಿಗಳಾಗಿದ್ದಾರೆ. ಅವರು ಸೂರೆಯಾದರೂ, ತಪ್ಪಿಸುವವನು ಒಬ್ಬನೂ ಇಲ್ಲ. ಕೊಳ್ಳೆಯಾದದ್ದನ್ನು, “ತಿರುಗಿ ಹಿಂದಕ್ಕೆ ಕೊಡು,” ಎಂದು ಹೇಳುವ ಒಬ್ಬನೂ ಇಲ್ಲ.


ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಈಜಿಪ್ಟಿನ ಶ್ರೇಷ್ಠವಾದವುಗಳನ್ನೂ, ಪ್ರಯಾಣಕ್ಕೋಸ್ಕರ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿ, ರೊಟ್ಟಿ, ಆಹಾರಗಳನ್ನೂ ಕಳುಹಿಸಿದನು.


ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು, ಅಲ್ಲಿಂದ ಹೊರಟು ಹೋದರು.


ಈಜಿಪ್ಟಿನಲ್ಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಈಜಿಪ್ಟಿನವರಿಗೆ ಮಾರಿದನು. ಆಗ ಬರವು ಈಜಿಪ್ಟ್ ದೇಶದಲ್ಲಿ ಕಠಿಣವಾಗಿತ್ತು.


ಅವರನ್ನು ಮೈಗಾವಲಿನವರ ದಳಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸ್ಥಳವಾಗಿತ್ತು.


ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.


ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ಕರೆತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು. ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಿದರು.


“ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು, ‘ನೀವು ಯಥಾರ್ಥರೆಂದು ನಾನು ಇದರಲ್ಲಿ ತಿಳಿದುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು, ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತೆಗೆದುಕೊಂಡು ಹೋಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು