Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೋಸೇಫನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಿದ್ದನು ಎಂಬುದು ಅವರಿಗೆ ಗೊತ್ತಾಗಲಿಲ್ಲ. ಏಕೆಂದರೆ ಯೋಸೇಫನು ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜೋಸೆಫನು ಒಬ್ಬ ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದುದರಿಂದ ಅವನಿಗೆ ತಮ್ಮ ಮಾತು ಗೊತ್ತಾಗುತ್ತಿದೆ ಎಂದು ಅವರು ನೆನೆಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೋಸೇಫನು ದ್ವಿಭಾಷಿಯ ಮುಖಾಂತರ ಅವರ ಸಂಗಡ ಮಾತಾಡಿದದರಿಂದ, ಅವರು ತಮ್ಮ ಮಾತು ಅವನಿಗೆ ಗೊತ್ತಾಗುವದೆಂದು ನೆನಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋಸೇಫನು ತನ್ನ ಸಹೋದರರೊಂದಿಗೆ ಭಾಷಾಂತರಕಾರನ ಮೂಲಕ ಮಾತಾಡುತ್ತಿದ್ದನು. ಆದ್ದರಿಂದ ಆ ಸಹೋದರರು ತಮ್ಮ ಭಾಷೆ ಯೋಸೇಫನಿಗೆ ಅರ್ಥವಾಗುವುದಿಲ್ಲವೆಂದು ತಿಳಿದುಕೊಂಡಿದ್ದರು. ಆದರೆ ಯೋಸೇಫನಿಗೆ ಅವರ ಮಾತುಗಳೆಲ್ಲಾ ಅರ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:23
6 ತಿಳಿವುಗಳ ಹೋಲಿಕೆ  

ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.


ಆಗ ರೂಬೇನನು ಅವರಿಗೆ ಉತ್ತರವಾಗಿ, “ಹುಡುಗನಿಗೆ ಏನೂ ಕೇಡು ಮಾಡಬೇಡಿರಿ, ಎಂದು ನಾನು ನಿಮಗೆ ಹೇಳಿದರೂ ನೀವು ಕೇಳಲಿಲ್ಲ. ಆದ್ದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ಈಗ ನಾವು ಲೆಕ್ಕ ಒಪ್ಪಿಸುತ್ತಿದ್ದೇವೆ,” ಎಂದನು.


ಅನಂತರ ಯೋಸೇಫನು ಅವರ ಬಳಿಯಿಂದ ಹೊರಟುಹೋಗಿ ಅತ್ತನು. ಮತ್ತೆ ಅವರ ಬಳಿಗೆ ಬಂದು, ಅವರ ಸಂಗಡ ಮಾತನಾಡಿ ಅವರೊಂದಿಗೆ ಸಿಮೆಯೋನನನ್ನು ತಂದು, ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿದನು.


“ನಿಮ್ಮ ಸಂಗಡ ಮಾತನಾಡುವುದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ, ನನ್ನ ಸಹೋದರ ಬೆನ್ಯಾಮೀನನ ಕಣ್ಣುಗಳೂ ನೋಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು