Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:28 - ಕನ್ನಡ ಸಮಕಾಲಿಕ ಅನುವಾದ

28 ಅವನು ತನ್ನ ಸಹೋದರರಿಗೆ, “ನನ್ನ ಹಣವನ್ನು ಹಿಂದಕ್ಕೆ ಕೊಟ್ಟಿದ್ದಾರೆ, ಅದು ನನ್ನ ಚೀಲದಲ್ಲಿದೆ,” ಎಂದು ಹೇಳಿದ. ಅವರಿಗೆ ಹೃದಯ ಕಂಪನವಾದಂತಾಗಿ ಹೆದರಿ ಒಬ್ಬರಿಗೊಬ್ಬರು, “ದೇವರು ನಮಗೆ ಮಾಡಿದ್ದೇನು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನಾನು ಕೊಟ್ಟ ಹಣ ನನಗೆ ವಾಪಸ್ಸಾಗಿದೆ; ಇಗೋ, ನನ್ನ ಚೀಲದಲ್ಲಿದೆ,” ಎಂದು ತನ್ನ ಅಣ್ಣತಮ್ಮಂದಿರಿಗೆ ಹೇಳಿದ. ಅವರು ಕಕ್ಕಾಬಿಕ್ಕಿಯಾಗಿ, ಒಬ್ಬರನ್ನೊಬ್ಬರು ಬೆರಗಿನಿಂದ ನೋಡುತ್ತಾ, “ನಮಗೇಕೆ ದೇವರು ಹೀಗೆ ಮಾಡಿದ್ದಾರೆ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಅಣ್ಣತಮ್ಮಂದಿರಿಗೆ - ನಾನು ಕೊಟ್ಟ ಹಣವು ಹಿಂದಕ್ಕೆ ಬಂದದೆ; ಇಗೋ, ನನ್ನ ಚೀಲದಲ್ಲಿದೆ ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ - ದೇವರು ನಮಗೆ ಮಾಡಿದ್ದು ಇದೇನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:28
14 ತಿಳಿವುಗಳ ಹೋಲಿಕೆ  

ಆಕಾಶದ ಶಕ್ತಿಗಳು ಕದಲುವುದರಿಂದ ಲೋಕಕ್ಕೆ ಏನು ಸಂಭವಿಸುವುದೋ ಎಂಬ ಭಯಭೀತಿಯಿಂದ, ಮಾನವರು ಮನಗುಂದಿಹೋಗುವರು.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆದೆನು. ಆದರೆ ಅಷ್ಟರಲ್ಲಿ ನನ್ನ ಪ್ರಿಯನು ಹಿಂದಿರುಗಿ ಹೋಗಿಬಿಟ್ಟಿದ್ದನು. ಅವನು ಹೋಗಿದ್ದರಿಂದ ನನ್ನ ಹೃದಯ ಕುಗ್ಗಿಹೋಯಿತು. ಅವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ. ಅವನನ್ನು ಕರೆದೆನು, ಉತ್ತರವೇ ಇಲ್ಲ.


ನನ್ನ ಹೃದಯವು ಕುಂದಿ ಹೋಗಿರಲಾಗಿ ಭೂಮಿಯ ಅಂತ್ಯದಿಂದ ನಿಮಗೆ ಮೊರೆಯಿಡುತ್ತಿರುವೆನು. ನನಗಿಂತ ಎತ್ತರವಾದ ಬಂಡೆಗೆ ನನ್ನನ್ನು ನಡೆಸಿರಿ.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ಅದಕ್ಕವನು, “ನಿಮಗೆ ಸಮಾಧಾನವಿರಲಿ, ಭಯಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ನಿಕ್ಷೇಪವನ್ನು ಕೊಟ್ಟಿದ್ದಾರೆ. ನಿಮ್ಮ ಹಣವು ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.


ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.


ಆಗ ಇಸಾಕನು ಬಹಳವಾಗಿ ನಡುಗುತ್ತಾ, “ನೀನು ಬರುವುದಕ್ಕಿಂತ ಮೊದಲು ಬೇಟೆಯಾಡಿ ನನಗೆ ಊಟ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವುದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವದಿಸಿದೆನು. ಅವನು ಆಶೀರ್ವಾದ ಹೊಂದಿರುವನು,” ಎಂದನು.


ಅವರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದಾಗ, ತಮಗೆ ಸಂಭವಿಸಿದ್ದೆಲ್ಲವನ್ನೂ ಅವನಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು