ಆದಿಕಾಂಡ 42:33 - ಕನ್ನಡ ಸಮಕಾಲಿಕ ಅನುವಾದ33 “ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು, ‘ನೀವು ಯಥಾರ್ಥರೆಂದು ನಾನು ಇದರಲ್ಲಿ ತಿಳಿದುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು, ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತೆಗೆದುಕೊಂಡು ಹೋಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅದಕ್ಕೆ ಆ ದೇಶಾಧಿಪತಿ, “ನೀವು ಸತ್ಯವಂತರೋ ಇಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮಲ್ಲಿ ಒಬ್ಬನನ್ನು ನನ್ನ ಬಳಿಯಲ್ಲೆ ಬಿಟ್ಟುಹೋಗಿ; ನಿಮ್ಮ ಕುಟುಂಬದವರ ಕ್ಷಾಮನಿವಾರಣೆಗೆ ಬೇಕಾದುದನ್ನು ತೆಗೆದುಕೊಂಡು ಹೋಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅದಕ್ಕೆ ದೇಶಾಧಿಪತಿ - ನೀವು ಸತ್ಯವಂತರೋ ಅಲ್ಲವೋ ಎಂಬದು ಗೊತ್ತಾಗುವದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ಆಗ ಆ ದೇಶದ ರಾಜ್ಯಪಾಲನು, ‘ನೀವು ಯಥಾರ್ಥವಂತರೆಂದು ತೋರಿಸಬೇಕಾದರೆ ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಕುಟುಂಬಗಳಿಗೆ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ. ಅಧ್ಯಾಯವನ್ನು ನೋಡಿ |