ಆದಿಕಾಂಡ 42:35 - ಕನ್ನಡ ಸಮಕಾಲಿಕ ಅನುವಾದ35 ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ, ಅವನವನ ಹಣದ ಗಂಟು, ಅವನವನ ಚೀಲದಲ್ಲಿ ಇತ್ತು. ಅವರೂ, ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅವರು ತಮ್ಮ ತಮ್ಮ ಚೀಲವನ್ನು ಬಿಚ್ಚಿನೋಡಿದಾಗ ಪ್ರತಿಯೊಬ್ಬನ ಚೀಲದಲ್ಲೂ ಅವನವನ ಹಣದ ಗಂಟು ಸಿಕ್ಕಿತು. ಆ ಗಂಟುಗಳನ್ನು ಕಂಡಾಗ ಅವರೂ ಅವರ ತಂದೆಯೂ ಚಕಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವರು ತಮ್ಮ ಚೀಲಗಳನ್ನು ಬಿಚ್ಚಿನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವನವನ ಹಣದ ಗಂಟು ಸಿಕ್ಕಿತು. ಅವರೂ ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು. ಅಧ್ಯಾಯವನ್ನು ನೋಡಿ |