Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಐಗುಪ್ತದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರಿಸುವವನು ಯೋಸೇಫನೇ. ಹೀಗಿರುವದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:6
19 ತಿಳಿವುಗಳ ಹೋಲಿಕೆ  

ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.


“ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.


“ಆದ್ದರಿಂದ ಈಗ ನೀವಲ್ಲ, ದೇವರು ತಾವೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ. ದೇವರು ನನ್ನನ್ನು ಫರೋಹನಿಗೆ ತಂದೆಯಾಗಿಯೂ, ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಈಜಿಪ್ಟ್ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾರೆ.


ಯೆಹೂದನೂ ಅವನ ಸಹೋದರರೂ ಯೋಸೇಫನು ಇನ್ನೂ ಮನೆಯಲ್ಲಿದ್ದಾಗಲೇ, ಅವನ ಮನೆಗೆ ಬಂದು ಮುಂದೆ ಅಡ್ಡಬಿದ್ದರು.


ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ, ಲೋಟನು ಸೊದೋಮಿನ ಬಾಗಿಲಲ್ಲಿ ಕುಳಿತಿದ್ದನು. ಲೋಟನು ಅವರನ್ನು ಎದುರುಗೊಳ್ಳುವುದಕ್ಕೆ ಎದ್ದು ನೆಲದವರೆಗೆ ಬಾಗಿ,


ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.


ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವವರೆಗೆ ಏಳು ಸಾರಿ ನೆಲದವರೆಗೆ ಬಗ್ಗಿದನು.


ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.


ಆಗ ಯೋಸೇಫನು ಅವರನ್ನು ಮೊಣಕಾಲುಗಳ ಬಳಿಯಿಂದ ಬರಮಾಡಿ ತಂದೆಗೆ ಅಡ್ಡಬಿದ್ದನು.


ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.


ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು; ಆದರೆ ಅದನ್ನು ಮಾರುವವನ ಮೇಲೆ ಆಶೀರ್ವಾದವು ನೆಲೆಯಾಗಿರುವುದು.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ಯೋಸೇಫನು ಹೇಳಿದಂತೆ ಬರುವುದಕ್ಕಿದ್ದ ಬರಗಾಲದ ಏಳು ವರ್ಷಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರಗಾಲವಿತ್ತು. ಆದರೆ ಈಜಿಪ್ಟ್ ದೇಶದಲ್ಲೆಲ್ಲಾ ಆಹಾರವಿತ್ತು.


ಇದಲ್ಲದೆ ಭೂಮಿಯ ಮೇಲೆಲ್ಲಾ ಬರಗಾಲವು ಕಠಿಣವಾಗಿದ್ದದರಿಂದ, ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಈಜಿಪ್ಟಿಗೆ ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು