Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಡ್ಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:11
37 ತಿಳಿವುಗಳ ಹೋಲಿಕೆ  

ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.


ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?


“ ‘ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಮಿಠಾಯಿ, ಜೇನು, ಎಣ್ಣೆ ಮತ್ತು ಸುಗಂಧ ತೈಲದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.


ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.


ಆಗ ಸೌಲನು ತನ್ನ ಸೇವಕನಿಗೆ, “ನಾವು ಆ ಮನುಷ್ಯನ ಬಳಿಗೆ ಹೋದರೆ, ಏನು ತೆಗೆದುಕೊಂಡು ಹೋಗೋಣ? ನಮ್ಮ ಚೀಲಗಳಲ್ಲಿ ಇರುವ ರೊಟ್ಟಿ ಮುಗಿದು ಹೋಯಿತು. ದೇವರ ಮನುಷ್ಯನ ಬಳಿಗೆ ತೆಗೆದುಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ. ನಮ್ಮ ಬಳಿಯಲ್ಲಿ ಏನಿದೆ?” ಎಂದನು.


ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.


“ ‘ದೆದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದ ಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.


ನನ್ನ ಪ್ರಿಯನೇ, ಸುಗಂಧ ಸಸ್ಯ ಪರ್ವತಗಳ ಮೇಲಿರುವ ಜಿಂಕೆಯಂತೆಯೂ, ಪ್ರಾಯದ ಹುಲ್ಲೆಯಂತೆಯೂ ನೀನು ಬೇಗ ಬಾ.


ಜಟಾಮಾಂಸಿ ಅಷ್ಟೇ ಅಲ್ಲದೆ ಕೇಸರಿಯೂ ಬಜೆಯೂ ದಾಲ್ಚಿನ್ನಿಯೂ ಸಕಲ ಸಾಂಬ್ರಾಣಿ ಗಿಡಮೂಲಿಕೆಗಳೂ ರಕ್ತಬೋಳವೂ ಅಗರೂ ಸಕಲವಿಧ ಶ್ರೇಷ್ಠ ಸುಗಂಧ ದ್ರವ್ಯಗಳೂ ಬೆಳೆದಿವೆ.


ನನ್ನ ಪ್ರಿಯಳೇ, ವಧುವೇ! ನಿನ್ನ ಪ್ರೀತಿಯು ಎಷ್ಟೋ ಚೆಂದ. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧಗಳಿಗಿಂತ ನಿನ್ನ ತೈಲದ ಸುವಾಸನೆಯು ಎಷ್ಟೋ ಉತ್ತಮ!


ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು.


ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.


ಬುದ್ಧಿಹೀನನು ಕೈ ಕುಲುಕಿ ತನ್ನ ನೆರೆಯವನಿಗೆ ಜಾಮಿನನಾಗುತ್ತಾನೆ.


ನಿಮ್ಮ ದೇವರಾದ ಯೆಹೋವ ದೇವರಿಗೆ ಹರಕೆಮಾಡಿ ಸಲ್ಲಿಸಿರಿ. ದೇವರ ಸುತ್ತಲಿರುವವರೆಲ್ಲರು ಭಯಭಕ್ತಿಗೆ ಪಾತ್ರರಾದವರಿಗೆ ಕಾಣಿಕೆಗಳನ್ನು ತರಲಿ.


ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.


ಯೆರೂಸಲೇಮಿನ ನಿಮ್ಮ ಮಂದಿರದ ನಿಮಿತ್ತ ಅರಸರು ನಿಮಗೆ ಕಾಣಿಕೆಗಳನ್ನು ಸಮರ್ಪಿಸಲಿ.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.


ಆಹಾಜನು ಯೆಹೋವ ದೇವರ ಆಲಯದಲ್ಲಿಯೂ, ಅರಮನೆಯ ಖಜಾನೆಯಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ಆಗ ಅರಸನು ಹಜಾಯೇಲನಿಗೆ, “ನೀನು ಕೈಯಲ್ಲಿ ಕಾಣಿಕೆಯನ್ನು ತೆಗೆದುಕೊಂಡುಹೋಗಿ ದೇವರ ಮನುಷ್ಯನನ್ನು ಎದುರುಗೊಂಡು, ಈ ವ್ಯಾಧಿಯಿಂದ ನಾನು ಗುಣವಾಗುವೆನೋ? ಎಂದು ಅವನಿಂದ ಯೆಹೋವ ದೇವರನ್ನು ವಿಚಾರಿಸು,” ಎಂದನು.


ಅಲ್ಲದೆ ಅವನಿಗೆ, “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ದಾನವಾಗಿ ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದನು.


ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ, ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.


ಇದಲ್ಲದೆ ಸೊಲೊಮೋನನಿಗೆ ವರ್ತಕರಿಂದಲೂ, ವರ್ತಕರ ವ್ಯಾಪಾರದಿಂದಲೂ, ಅರೇಬಿಯದ ಅರಸರಿಂದಲೂ, ದೇಶದ ಅಧಿಪತಿಗಳಿಂದಲೂ ಸಹ ಬಂಗಾರವು ದೊರಕುತ್ತಿತ್ತು.


ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತೆಗೆದುಕೊಂಡು ಬಂದ ಈ ಕಾಣಿಕೆಯು ನನ್ನ ಒಡೆಯನ ಹೆಜ್ಜೆಯಲ್ಲಿ ನಡೆಯುವವರಿಗೆ ಸಲ್ಲಲಿ.


ಸೂರ್ಯನು ತರುವ ಉತ್ಕೃಷ್ಟವಾದವುಗಳಿಂದಲೂ ಚಂದ್ರನು ದಯಪಾಲಿಸುವ ಅಮೂಲ್ಯವಾದವುಗಳಿಂದಲೂ


ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.


ಆಗ ಯಾಕೋಬನು, “ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದಿದ್ದೆನಾದರೆ, ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು. ಏಕೆಂದರೆ ನಾನು ದೇವರ ಮುಖವನ್ನು ಕಂಡಂತೆ, ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ, ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ,


ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಏಕೆಂದರೆ ನಾವು ತಡಮಾಡದೆ ಇದ್ದಿದ್ದರೆ, ಇಷ್ಟರಲ್ಲಿ ಎರಡು ಸಾರಿ ಹೋಗಿ ಬರಬಹುದಾಗಿತ್ತು,” ಎಂದನು.


ಆಗ ಅವರು ಆ ಕಾಣಿಕೆಯನ್ನು ತೆಗೆದುಕೊಂಡು, ತಮ್ಮ ಕೈಯಲ್ಲಿ ಎರಡರಷ್ಟು ಹಣವನ್ನೂ, ಬೆನ್ಯಾಮೀನನನ್ನೂ ಕರೆದುಕೊಂಡು ಈಜಿಪ್ಟಿಗೆ ಹೋಗಿ, ಯೋಸೇಫನ ಮುಂದೆ ನಿಂತರು.


ಅವರು ಅಲ್ಲಿ ಊಟ ಮಾಡಬೇಕೆಂದು ಕೇಳಿದ್ದರಿಂದ, ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.


ಯೋಸೇಫನು ಮನೆಗೆ ಬಂದ ಮೇಲೆ, ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತೆಗೆದುಕೊಂಡು ಬಂದು, ಅವನಿಗೆ ನೆಲದವರೆಗೂ ಅಡ್ಡಬಿದ್ದರು.


“ ‘ಶೆಬದವರು, ರಾಮದವರು ನಿನ್ನ ಕಡೆಯ ವರ್ತಕರಾಗಿ ಎಲ್ಲಾ ಶ್ರೇಷ್ಠವಾದ ಸುಗಂಧ ದ್ರವ್ಯದಿಂದಲೂ ಎಲ್ಲಾ ಬೆಲೆಯುಳ್ಳ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು