Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:12 - ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಬಂದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದೂ ಅಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳಿಸಿದ ಹಣವನ್ನು ತೆಗೆದುಕೊಂಡು ಹೋಗಿ; ಬಹುಶಃ ಅವರಿಗೆ ತಿಳಿಯದೆ ಅದು ನಿಮ್ಮ ಕೈಗೆ ಬಂದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ತೆಗೆದುಕೊಂಡು ಹೋಗಿರಿ; ಒಂದು ವೇಳೆ ಅದು ಅವರಿಗೆ ತಿಳಿಯದೆ ನಿಮ್ಮ ಕೈಗೆ ಬಂದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಸಲ ಎರಡರಷ್ಟು ಹಣವನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ. ಕಳೆದ ಸಲ ನೀವು ಪಾವತಿ ಮಾಡಿದ್ದರೂ ಹಿಂತಿರುಗಿಸಲಾದ ಹಣವನ್ನು ತೆಗೆದುಕೊಂಡು ಹೋಗಿ. ಒಂದುವೇಳೆ ರಾಜ್ಯಪಾಲನು ತಪ್ಪು ಮಾಡಿದ್ದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:12
12 ತಿಳಿವುಗಳ ಹೋಲಿಕೆ  

ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸಬೇಕೆಂದೂ, ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರುಗಿ ಇಡಬೇಕೆಂದೂ, ಪ್ರಯಾಣಕ್ಕಾಗಿ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು.


ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ, ಅವನವನ ಹಣದ ಗಂಟು, ಅವನವನ ಚೀಲದಲ್ಲಿ ಇತ್ತು. ಅವರೂ, ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.


ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು.


ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ಏಕೆಂದರೆ, ಕರ್ತ ಯೇಸುವಿನ ದೃಷ್ಟಿಯಲ್ಲಿ ಮಾತ್ರ ಅಲ್ಲ, ಜನರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡಬೇಕೆಂಬುದು ನಮ್ಮ ಪ್ರಯಾಸವಾಗಿದೆ.


ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.


ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.


ನಿಮ್ಮ ಸಹೋದರನನ್ನು ಕರೆದುಕೊಂಡು ಆ ಮನುಷ್ಯನ ಬಳಿಗೆ ತಿರುಗಿ ಹೋಗಿರಿ.


ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ, ಪ್ರತಿಯೊಬ್ಬನ ಹಣವು ಅವನವನ ಚೀಲದ ಬಾಯಲ್ಲಿ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರುಗಿ ತೆಗೆದುಕೊಂಡು ಬಂದಿದ್ದೇವೆ.


ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಈ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು