Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:18 - ಕನ್ನಡ ಸಮಕಾಲಿಕ ಅನುವಾದ

18 ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಹಿಂದೆ ನಮ್ಮ ಚೀಲಗಳಲ್ಲಿ ತಿರುಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು, ನಮ್ಮ ಮೇಲೆ ಬಿದ್ದು, ನಮ್ಮನ್ನು ದಾಸರಾಗಿ ಮಾಡಿ, ನಮ್ಮ ಕತ್ತೆಗಳನ್ನು ತೆಗೆದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಲ್ಲಿಗೆ ಹೋಗುತ್ತಿದ್ದ ಅವರಿಗೆ ಭಯವಾಯಿತು. “ಹಿಂದೆ ನಾವು ಚೀಲಗಳಲ್ಲಿ ವಾಪಸ್ಸು ತೆಗೆದುಕೊಂಡು ಹೋದ ಹಣದ ಪ್ರಯುಕ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ದಿಢೀರನೆ ನಮ್ಮ ಮೇಲೆ ಬಿದ್ದು ನಮ್ಮನ್ನು ಗುಲಾಮರನ್ನಾಗಿಸಿಕೊಳ್ಳಬಹುದು. ನಮ್ಮ ಕತ್ತೆಗಳನ್ನು ಹಿಡಿದುಕೊಳ್ಳಬಹುದು,” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮುಂಚೆ ನಾವು ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿವಿುತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ನಮ್ಮ ಮೇಲೆ ಫಕ್ಕನೆ ಬಿದ್ದು ನಮ್ಮನ್ನು ಕತ್ತೆಗಳ ಸಹಿತವಾಗಿ ಹಿಡಿಸಿ ಗುಲಾಮರನ್ನಾಗಿ ಮಾಡಿಕೊಳ್ಳಬೇಕೆಂದಿದ್ದಾನೆ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:18
20 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ, ಅವನವನ ಹಣದ ಗಂಟು, ಅವನವನ ಚೀಲದಲ್ಲಿ ಇತ್ತು. ಅವರೂ, ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.


ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ.


ಆದರೆ ಹೆರೋದನು ಇದನ್ನು ಕೇಳಿ, “ನಾನು ಶಿರಚ್ಛೇದನ ಮಾಡಿದ ಯೋಹಾನನೇ, ತಿರುಗಿ ಜೀವಂತವಾಗಿ ಬಂದಿದ್ದಾನೆ,” ಎಂದು ಹೇಳಿದನು.


ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.


ಇದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ನಾನು ಪ್ರಯತ್ನಿಸಿದಾಗ, ಅದು ನನಗೆ ಬಹಳವಾಗಿ ಕಷ್ಟಕರವಾಗಿತ್ತು.


ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.


ಆ ಯುವಕರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬರುತ್ತಿದ್ದಾರೆ; ನಾಶನದಲ್ಲಿರುವ ನನ್ನ ಮೇಲೆ ಅವರು ಉರುಳಿಬೀಳಲಿದ್ದಾರೆ.


ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.


ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.


ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಂಡದ್ದರಿಂದ ನಿಶ್ಚಯವಾಗಿ ಸಾಯುವೆವು,” ಎಂದನು.


ಅವನು, ‘ನಿನ್ನ ಮಗಳು ಕನ್ನಿಕೆಯಲ್ಲವೆಂದು ಕಂಡೆನೆಂಬುದಾಗಿ, ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟಿದ್ದಾನೆ.’ ಆದರೂ ನನ್ನ ಮಗಳ ಕನ್ಯಾಲಕ್ಷಣಕ್ಕೆ ಇದೇ ಪ್ರಮಾಣ,” ಎಂದು ಹೇಳಿ, ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.


ಅವಳ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನು ಹೇಳಿ, “ನಾನು ಇವಳನ್ನು ಮದುವೆ ಮಾಡಿಕೊಂಡೆ, ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು,” ಎಂದು ಹೇಳಿ ಅವಳ ಮೇಲೆ ಆಪಾದನೆ ತರಬಹುದು.


ಅವನು ತನ್ನ ಸಹೋದರರಿಗೆ, “ನನ್ನ ಹಣವನ್ನು ಹಿಂದಕ್ಕೆ ಕೊಟ್ಟಿದ್ದಾರೆ, ಅದು ನನ್ನ ಚೀಲದಲ್ಲಿದೆ,” ಎಂದು ಹೇಳಿದ. ಅವರಿಗೆ ಹೃದಯ ಕಂಪನವಾದಂತಾಗಿ ಹೆದರಿ ಒಬ್ಬರಿಗೊಬ್ಬರು, “ದೇವರು ನಮಗೆ ಮಾಡಿದ್ದೇನು?” ಎಂದರು.


ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು.


ಯೋಸೇಫನು ಹೇಳಿದಂತೆ ಅವನು ಮಾಡಿದನು. ಅವನು ಆ ಮನುಷ್ಯರನ್ನು ಯೋಸೇಫನ ಮನೆಗೆ ಕರೆದುಕೊಂಡು ಹೋದನು.


ಆಗ ಅವರು ಯೋಸೇಫನ ಮನೆಯ ಬಳಿಗೆ ಹೋಗಿ, ಬಾಗಿಲಿನ ಮುಂದೆ ಗೃಹನಿರ್ವಾಹಕನ ಸಂಗಡ ಮಾತನಾಡಿ,


ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.


ಆಗ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವುದಕ್ಕೆ ವಸತಿಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ, ಚೀಲದ ಬಾಯಲ್ಲಿಟ್ಟಿದ್ದ ತನ್ನ ಹಣವನ್ನು ಕಂಡನು.


ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವುದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು