Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:25 - ಕನ್ನಡ ಸಮಕಾಲಿಕ ಅನುವಾದ

25 ಅವರು ಅಲ್ಲಿ ಊಟ ಮಾಡಬೇಕೆಂದು ಕೇಳಿದ್ದರಿಂದ, ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ತಾವು ಅಲ್ಲೇ ಊಟಮಾಡಬೇಕೆಂಬ ಸಂಗತಿ ಅವರಿಗೆ ತಿಳಿಯಿತು. ಆದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡರು. ಜೋಸೆಫನು ಬರುವ ತನಕ, ಮಧ್ಯಾಹ್ನದವರೆಗೆ ಕಾದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ತಾವು ಅಲ್ಲೇ ಊಟ ಮಾಡಬೇಕೆಂಬುವ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡು ಯೋಸೇಫನು ಮಧ್ಯಾಹ್ನದಲ್ಲಿ ಬರುವ ತನಕ ಕಾದು ಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ತಾವು ಯೋಸೇಫನೊಂದಿಗೆ ಊಟ ಮಾಡುವುದಾಗಿ ಸಹೋದರರಿಗೆ ತಿಳಿಯಿತು. ಆದ್ದರಿಂದ ಅವರು ಅವನಿಗೆ ಕೊಡಲು ತಮ್ಮ ಉಡುಗೊರೆಗಳನ್ನು ಮಧ್ಯಾಹ್ನದವರೆಗೆ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:25
3 ತಿಳಿವುಗಳ ಹೋಲಿಕೆ  

ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


ಯೋಸೇಫನು ಬೆನ್ಯಾಮೀನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ, “ಈ ಮನುಷ್ಯರನ್ನು ಮನೆಗೆ ಕರೆದುಕೊಂಡು ಹೋಗಿ, ಮಾಂಸದ ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಮಧ್ಯಾಹ್ನದಲ್ಲಿ ನನ್ನ ಸಂಗಡ ಊಟಮಾಡಬೇಕು,” ಎಂದನು.


ಆಗ ಅವರು ಆ ಕಾಣಿಕೆಯನ್ನು ತೆಗೆದುಕೊಂಡು, ತಮ್ಮ ಕೈಯಲ್ಲಿ ಎರಡರಷ್ಟು ಹಣವನ್ನೂ, ಬೆನ್ಯಾಮೀನನನ್ನೂ ಕರೆದುಕೊಂಡು ಈಜಿಪ್ಟಿಗೆ ಹೋಗಿ, ಯೋಸೇಫನ ಮುಂದೆ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು