Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:27 - ಕನ್ನಡ ಸಮಕಾಲಿಕ ಅನುವಾದ

27 ಆಗ ಯೋಸೇಫನು ಅವರ ಕ್ಷೇಮಸಮಾಚಾರವನ್ನು ಕೇಳಿ, “ನೀವು ಹೇಳಿದ ವೃದ್ಧನಾದ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಬಳಿಕ, “ನೀವು ಹೇಳಿದ ಮುಪ್ಪುವಯಸ್ಸಿನ ನಿಮ್ಮ ತಂದೆ ಕ್ಷೇಮವೋ? ಇನ್ನು ಬದುಕಿದ್ದಾನೋ?" ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿ - ನೀವು ಹೇಳಿದ ಮುದುಕನಾಗಿರುವ ನಿಮ್ಮ ತಂದೆಗೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ ಎಂದು ಕೇಳಲು ಅವರು ಬೊಗ್ಗಿ ನಮಸ್ಕಾರಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೋಸೇಫನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಯೋಸೇಫನು “ನೀವು ನನಗೆ ತಿಳಿಸಿದ ನಿಮ್ಮ ವೃದ್ಧನಾದ ತಂದೆ ಕ್ಷೇಮವಾಗಿದ್ದಾನೆಯೇ? ಇನ್ನೂ ಜೀವಂತವಾಗಿರುವನೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:27
12 ತಿಳಿವುಗಳ ಹೋಲಿಕೆ  

ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.


ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.


ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು. ದಾವೀದನು ಅವರಿಗೆ, “ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ, ನನ್ನ ಹೆಸರಿನಿಂದ ಅವನ ಕ್ಷೇಮಸಮಾಚಾರವನ್ನು ಕೇಳಿ, ಬಾಳುವವನಾದ ಅವನಿಗೆ ಹೇಳಬೇಕಾದದ್ದೇನೆಂದರೆ:


ಆಗ ದಾವೀದನು ತಾನು ತೆಗೆದುಕೊಂಡು ಬಂದದ್ದನ್ನು, ವಸ್ತುಗಳನ್ನು ಕಾಯುವವನ ಕೈಯಲ್ಲಿ ಇಟ್ಟುಬಿಟ್ಟು, ರಣರಂಗಕ್ಕೆ ಓಡಿಹೋಗಿ, ತನ್ನ ಸಹೋದರರ ಬಳಿಗೆ ಬಂದು, ಯೋಗಕ್ಷೇಮ ವಿಚಾರಿಸಿದನು.


ಅವರು ಅಲ್ಲಿಗೆ ಹೋಗಿ ಮೀಕನ ಮನೆಯಲ್ಲಿರುವ ಯುವಕನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸತೊಡಗಿದರು.


ಮೋಶೆಗೆ ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ, ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.


ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು.


ಯೋಸೇಫನು ಫರೋಹನಿಗೆ ಉತ್ತರವಾಗಿ, “ಅದನ್ನು ನಾನು ಹೇಳಲಾರೆ, ಆದರೆ ದೇವರು ಫರೋಹನಿಗೆ ಮೆಚ್ಚಿಕೆಯಾದ ಉತ್ತರವನ್ನು ಕೊಡುವರು,” ಎಂದನು.


ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,


ಅವರು ಅವನಿಗೆ, “ಆ ಮನುಷ್ಯನು ನಮ್ಮ ವಿಷಯದಲ್ಲಿ ಮತ್ತು ನಮ್ಮ ಮನೆಯವರ ವಿಷಯದಲ್ಲಿ ನೇರವಾಗಿ ಕೇಳಿ ಅವನು, ‘ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ?’ ಎಂದು ಕೇಳಿದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ,’ ಎಂದು ಅವನು ನಮಗೆ ಹೇಳುತ್ತಾನೆಂದು ನಮಗೆ ಹೇಗೆ ತಿಳಿಯಲು ಸಾಧ್ಯ?” ಎಂದರು.


ಯೋಸೇಫನು ತನ್ನ ಸಹೋದರರಿಗೆ, “ನಾನು ಯೋಸೇಫನು! ನನ್ನ ತಂದೆಯು ಬದುಕಿದ್ದಾನೋ?” ಎಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ, ಅವನಿಗೆ ಉತ್ತರ ಕೊಡಲಾರದೆ ಹೋದರು.


ನೀನು ಅವಳನ್ನು ಎದುರುಗೊಳ್ಳಲು ಓಡಿಹೋಗಿ, ಅವಳಿಗೆ, ‘ನಿನಗೂ, ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ? ಎಂದು ಕೇಳು,’ ” ಎಂದನು. ಅವಳು, “ಕ್ಷೇಮ” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು