Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:28 - ಕನ್ನಡ ಸಮಕಾಲಿಕ ಅನುವಾದ

28 ಅದಕ್ಕವರು, “ನಿನ್ನ ದಾಸನಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ, ಅವನು ಇನ್ನೂ ಬದುಕಿದ್ದಾನೆ,” ಎಂದು ಹೇಳಿ ತಮ್ಮ ತಲೆಗಳನ್ನು ಮತ್ತೆ ಬಾಗಿಸಿ ವಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರು ಮತ್ತೆ ನೆಲದವರೆಗೆ ಬಾಗಿ ನಮಸ್ಕಾರ ಮಾಡಿ, “ನಿಮ್ಮ ಸೇವಕರಾದ ನಮ್ಮ ತಂದೆ ಇಂದಿಗೂ ಕ್ಷೇಮದಿಂದ ಇದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿನ್ನ ಸೇವಕನಾದ ನಮ್ಮ ತಂದೆಗೆ ಕ್ಷೇಮ; ಅವನು ಇನ್ನೂ ಇದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸಹೋದರರು, “ಸ್ವಾಮೀ, ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಜೀವಂತವಾಗಿದ್ದಾನೆ” ಎಂದು ಹೇಳಿದನು. ಬಳಿಕ ಅವರು ಮತ್ತೆ ಯೋಸೇಫನಿಗೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:28
8 ತಿಳಿವುಗಳ ಹೋಲಿಕೆ  

ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.


ಯೋಸೇಫನು ಮನೆಗೆ ಬಂದ ಮೇಲೆ, ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತೆಗೆದುಕೊಂಡು ಬಂದು, ಅವನಿಗೆ ನೆಲದವರೆಗೂ ಅಡ್ಡಬಿದ್ದರು.


ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.


ಆಗ ಬತ್ಷೆಬೆಳು ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನಾದ ದಾವೀದನು, “ನಿನಗೇನು ಬೇಕು?” ಎಂದನು.


ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.


ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.


ಮೋಶೆಗೆ ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ, ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು