ಆದಿಕಾಂಡ 43:29 - ಕನ್ನಡ ಸಮಕಾಲಿಕ ಅನುವಾದ29 ಆಗ ಅವನು ತನ್ನ ದೃಷ್ಟಿಯಿಟ್ಟು, ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾಮೀನನನ್ನು ನೋಡಿ, “ನೀವು ನನಗೆ ಹೇಳಿದ ನಿಮ್ಮ ಚಿಕ್ಕ ತಮ್ಮನು ಇವನೋ?” ಎಂದು ಹೇಳಿ, “ನನ್ನ ಮಗನೇ, ದೇವರು ನಿನಗೆ ಕೃಪಾಳುವಾಗಿರಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅನಂತರ ಕಣ್ಣೆತ್ತಿ, ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿದನು. “ನೀವು ಹೇಳಿದ ನಿಮ್ಮ ಕಿರಿಯ ತಮ್ಮ ಇವನೇನೋ?” ಎಂದು ಕೇಳಿ ಅವನಿಗೆ, “ಮಗು, ದೇವರ ಪ್ರೀತಿ ನಿನ್ನ ಮೇಲಿರಲಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ - ನೀವು ಹೇಳಿದ ನಿಮ್ಮ ಕಿರೀ ತಮ್ಮನು ಇವನೋ ಎಂದು ಕೇಳಿ ಅವನಿಗೆ - ಮಗನೇ, ದೇವರ ದಯೆ ನಿನ್ನ ಮೇಲಿರಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಬಳಿಕ ಯೋಸೇಫನು ತನ್ನ ಸಹೋದರನಾದ ಬೆನ್ಯಾಮೀನನನ್ನು ನೋಡಿದನು. (ಬೆನ್ಯಾಮೀನ ಮತ್ತು ಯೋಸೇಫ ಒಂದೇ ತಾಯಿಯ ಮಕ್ಕಳು.) ಯೋಸೇಫನು, “ನೀವು ನನಗೆ ತಿಳಿಸಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿದನು. ಆಮೇಲೆ ಯೋಸೇಫನು ಬೆನ್ಯಾಮೀನನಿಗೆ “ಮಗನೇ, ದೇವರು ನಿನಗೆ ಒಳ್ಳೆಯದನ್ನು ಮಾಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |