ಆದಿಕಾಂಡ 43:30 - ಕನ್ನಡ ಸಮಕಾಲಿಕ ಅನುವಾದ30 ಆಗ ಯೋಸೇಫನ ಕರುಳು ತನ್ನ ತಮ್ಮನ ಬಗ್ಗೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವುದಕ್ಕೆ ಸ್ಥಳವನ್ನು ಹುಡುಕಿ, ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೋಸೇಫನಿಗೆ ತಮ್ಮನ ಮೇಲೆ ಕರುಳು ಮರುಗಿದ್ದರಿಂದ ಅವನು ಬೇಗನೆ ಎದ್ದು ಅಳುವದಕ್ಕೆ ಸ್ಥಳವನ್ನು ನೋಡಿಕೊಂಡು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು. ಅಧ್ಯಾಯವನ್ನು ನೋಡಿ |