Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:34 - ಕನ್ನಡ ಸಮಕಾಲಿಕ ಅನುವಾದ

34 ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು ಮತ್ತು ಅವರು ಅವನ ಸಂಗಡ ಕುಡಿದು ಸಂತೋಷದಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಜೋಸೆಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳಿಸಿದನು. ಬೆನ್ಯಾಮೀನನಿಗೆ ಬಂದ ಭಾಗವಾದರೋ ಮಿಕ್ಕವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಛವಾಗಿ ಪಾನಮಾಡಿ ಜೋಸೆಫನ ಸಂಗಡ ಸಂಭ್ರಮದಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೋಸೇಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳುಹಿಸಿದನು; ಆದರೆ ಬೆನ್ಯಾಮೀನನಿಗೆ ಬಂದ ಭಾಗವು ವಿುಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಫವಾಗಿ ಪಾನಮಾಡಿ ಅವನ ಸಂಗಡ ಸಂಭ್ರಮದಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:34
12 ತಿಳಿವುಗಳ ಹೋಲಿಕೆ  

ಅವರೆಲ್ಲರಿಗೆ ಬದಲು ವಸ್ತ್ರಗಳನ್ನೂ, ಬೆನ್ಯಾಮೀನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ, ಐದು ಬದಲು ವಸ್ತ್ರಗಳನ್ನೂ ಕೊಟ್ಟನು.


ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು.


ಅವನು ಹನ್ನಳನ್ನು ಪ್ರೀತಿಸಿದ್ದರಿಂದ ಹನ್ನಳಿಗೆ ಎರಡಷ್ಟು ಪಾಲನ್ನು ಕೊಡುತ್ತಿದ್ದನು. ಆದರೆ ಯೆಹೋವ ದೇವರು ಹನ್ನಳ ಗರ್ಭವನ್ನು ಮುಚ್ಚಿಬಿಟ್ಟಿದ್ದರು.


“ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.


ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು. ಅದಕ್ಕೆ ಅವರು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕೃತ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದು ಹೇಳಿದರು.


ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ನಾಶವಾಗುವವರಿಗೆ ಮದ್ಯಪಾನವಿರಲಿ. ಮನೋವ್ಯಥೆಪಡುವವರಿಗೆ ಮದ್ಯವಿರಲಿ.


ರಾಹೇಲಳ ಪುತ್ರರು: ಯೋಸೇಫ್ ಮತ್ತು ಬೆನ್ಯಾಮೀನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು