Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:7 - ಕನ್ನಡ ಸಮಕಾಲಿಕ ಅನುವಾದ

7 ಅವರು ಅವನಿಗೆ, “ಆ ಮನುಷ್ಯನು ನಮ್ಮ ವಿಷಯದಲ್ಲಿ ಮತ್ತು ನಮ್ಮ ಮನೆಯವರ ವಿಷಯದಲ್ಲಿ ನೇರವಾಗಿ ಕೇಳಿ ಅವನು, ‘ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ?’ ಎಂದು ಕೇಳಿದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ,’ ಎಂದು ಅವನು ನಮಗೆ ಹೇಳುತ್ತಾನೆಂದು ನಮಗೆ ಹೇಗೆ ತಿಳಿಯಲು ಸಾಧ್ಯ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು, “ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿದನು, ಮತ್ತೆ ಅವನು ನಿಮ್ಮ ತಂದೆಯು ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ನಾವು ಉತ್ತರಕೊಟ್ಟೆವು. ಅವನು ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂದು ನಮಗೆ ಹೇಗೆ ತಿಳಿಯುವುದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಅವರು, ”ಆ ಮನುಷ್ಯ ನಿಮ್ಮ ವಿಷಯದಲ್ಲೂ ನಮ್ಮ ಮನೆಯವರ ವಿಷಯದಲ್ಲೂ ಸೂಕ್ಷ್ಮವಾಗಿ ವಿಚಾರಿಸಿದ; ನಿಮ್ಮ ತಂದೆ ಇನ್ನು ಜೀವದಿಂದ ಇದ್ದಾನೋ? ನಿಮಗೆ ತಮ್ಮನಿದ್ದಾನೋ? ಎಂದೆಲ್ಲ ಅವನೇ ಕೇಳಿದ. ಆ ಪ್ರಶ್ನೆಗಳಿಗೆ ನಾವು ತಕ್ಕ ಉತ್ತರ ಕೊಡಬೇಕಾಯಿತು. ಅಲ್ಲದೆ, ಅವನು ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿ', ಎಂದು ಕೇಳುತ್ತಾನೆಂದು ತಿಳಿಯಲು ನಮಗೆ ಹೇಗೆ ಸಾಧ್ಯವಿತ್ತು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿ, ನಿಮ್ಮ ತಂದೆಯು ಇನ್ನೂ ಜೀವದಿಂದಿದ್ದಾನೋ? ನಿಮಗೆ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ಉತ್ತರಕೊಟ್ಟೆವು. ಅವನು - ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂಬದು ನಮಗೆ ಹೇಗೆ ತಿಳಿಯುವದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಹೋದರರು, “ಆ ಮನುಷ್ಯನು ನಮ್ಮ ವಿಷಯವಾಗಿಯೂ ನಮ್ಮ ಕುಟುಂಬದ ವಿಷಯವಾಗಿಯೂ ತಿಳಿದುಕೊಳ್ಳಲು ಸೂಕ್ಷ್ಮವಾಗಿ ಪ್ರಶ್ನೆಗಳನ್ನು ಕೇಳಿದನು. ಅವನು ನಮಗೆ, ‘ನಿಮ್ಮ ತಂದೆಯು ಇನ್ನೂ ಜೀವಂತವಾಗಿರುವನೇ? ನಿಮಗೆ ಮನೆಯಲ್ಲಿ ಮತ್ತೊಬ್ಬ ಸಹೋದರನಿರುವನೇ?’ ಎಂದು ಕೇಳಿದನು. ನಾವು ಅವನ ಪ್ರಶ್ನೆಗಳಿಗೆ ಮಾತ್ರ ಉತ್ತರಕೊಟ್ಟೆವು. ನಮ್ಮ ಸಹೋದರನನ್ನು ತನ್ನ ಬಳಿಗೆ ಕರೆದುಕೊಂಡು ಬರಬೇಕೆಂದು ಅವನು ಹೇಳುತ್ತಾನೆಂದು ನಮಗೆ ತಿಳಿದಿರಲಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:7
6 ತಿಳಿವುಗಳ ಹೋಲಿಕೆ  

ಆಗ ಯೆಹೂದನು ಅವನಿಗೆ, “ಆ ಮನುಷ್ಯನು ನಮಗೆ ನಿಮ್ಮ ಸಹೋದರನು ನಿಮ್ಮ ಸಂಗಡ ಇದ್ದ ಹೊರತು, ನೀವು ನನ್ನ ಮುಖವನ್ನು ನೋಡಬಾರದೆಂದು, ನಮಗೆ ದೃಢವಾಗಿ ನಿರ್ಣಯಿಸಿ ಹೇಳಿದ್ದಾನೆ.


ಆಗ ಯೋಸೇಫನು ಅವರ ಕ್ಷೇಮಸಮಾಚಾರವನ್ನು ಕೇಳಿ, “ನೀವು ಹೇಳಿದ ವೃದ್ಧನಾದ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದನು.


ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.


ಇಸ್ರಾಯೇಲನು, “ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಏಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ?” ಎಂದನು.


ನನ್ನ ಒಡೆಯನೇ, ‘ನಿಮಗೆ ತಂದೆಯೂ ಸಹೋದರರೂ ಇದ್ದಾರೋ,’ ಎಂದು ತನ್ನ ದಾಸರನ್ನು ಕೇಳಲು,


ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು