Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:8 - ಕನ್ನಡ ಸಮಕಾಲಿಕ ಅನುವಾದ

8 ಯೆಹೂದನು ತನ್ನ ತಂದೆ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಸಂಗಡ ಕಳುಹಿಸು, ಆಗ ನಾವು ಹೋಗುವೆವು. ನಾವು, ನೀನೂ ಮತ್ತು ನಮ್ಮ ಮಕ್ಕಳು ಸಾಯದೆ ಬದುಕುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಯೆಹೂದನು ತನ್ನ ತಂದೆ ಯಕೋಬನಿಗೆ, “ನೀವು, ನಾವು ಮತ್ತು ನಮ್ಮ ಮಕ್ಕಳು, ಎಲ್ಲರೂ ಸಾಯದೆ ಉಳಿಯಬೇಕಾದರೆ ಆ ಹುಡುಗನನ್ನು ನನ್ನ ಜೊತೆ ಕಳಿಸಿಕೊಡಿ, ನಾವು ಇದೀಗಲೆ ಹೊರಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ - ನೀನೂ ನಾವೂ ನಮ್ಮ ಮಕ್ಕಳೂ ಎಲ್ಲರೂ ಸಾಯದೆ ಬದುಕಿಕೊಳ್ಳುವಂತೆ ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡಪ್ಪಾ; ನಾವು ಹೊರಟು ಹೋಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಮೇಲೆ ಯೆಹೂದನು ತನ್ನ ತಂದೆಯಾದ ಇಸ್ರೇಲನಿಗೆ, “ನನ್ನೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡು. ನಾನು ಅವನನ್ನು ನೋಡಿಕೊಳ್ಳುವೆನು. ನಾವು ಈಜಿಪ್ಟಿಗೆ ಹೋಗಿ ಆಹಾರವನ್ನು ತರಬೇಕು. ಇಲ್ಲವಾದರೆ ನಾವೂ ಸಾಯುವೆವು, ನಮ್ಮ ಮಕ್ಕಳೂ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:8
14 ತಿಳಿವುಗಳ ಹೋಲಿಕೆ  

ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು.


“ರೂಬೇನನು ಸಾಯದೆ ಬದುಕಲಿ. ಅವನ ಜನರು ಕಡಿಮೆಯಾಗದಿರಲಿ.”


ನಾನು ಸಾಯದೆ ಬದುಕಿರುವೆನು, ಯೆಹೋವ ದೇವರು ಮಾಡಿದ್ದನ್ನು ಸಾರುವೆನು.


ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.


ಆಗ ಅವನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತೆಗೆದುಕೊಂಡು ಹೋಗಲಿ. ಅವು ಇಸ್ರಾಯೇಲಿನ ಸಮಸ್ತ ಸಮೂಹದಲ್ಲಿ ಉಳಿದವುಗಳ ಹಾಗೆ ಇವೆ. ಅಂದರೆ ಇಸ್ರಾಯೇಲಿನ ಸಮಸ್ತ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ, ನಾವು ಕಳುಹಿಸಿ ನೋಡೋಣ,” ಎಂದನು.


ನಾವು ಇಲ್ಲಿಯೇ ಇದ್ದರೆ, ಪಟ್ಟಣದಲ್ಲಿ ಬರವಿರುವುದರಿಂದ ಅಲ್ಲಿ ಸಾಯುತ್ತೇವೆ. ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯುತ್ತೇವೆ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಅವರಿಗೆ ಶರಣಾಗೋಣ. ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಅವರು ನಮ್ಮನ್ನು ಕೊಲ್ಲುವುದಾದರೆ ಕೊಲ್ಲಲಿ,” ಎಂದುಕೊಂಡರು.


ಆದರೆ ಸೆರೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು, ನೀವು ಅಲಕ್ಷ್ಯಮಾಡಿದ ದೇಶವನ್ನು ಅವರು ಅನುಭವಿಸುವರು.


ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


ಹೀಗಿರುವುದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ,” ಎಂದು ಹೇಳಿ, ಅವರನ್ನು ಸಂತೈಸಿ, ದಯೆಯಿಂದ ಮಾತನಾಡಿದನು.


ಯೋಸೇಫನ ಮನೆಯವರೆಲ್ಲರೂ ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋದರು. ಅವರ ಮಕ್ಕಳನ್ನೂ, ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತದಲ್ಲಿ ಬಿಟ್ಟರು.


“ಇದನ್ನು ಸಹ ನಿನ್ನ ಸಹೋದರರು ಹೇಳುವಂತೆ ನಿನಗೆ ಅಪ್ಪಣೆಯಾಗಿದೆ: ‘ಈಜಿಪ್ಟ್ ದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ, ಹೆಂಡತಿಯರಿಗಾಗಿಯೂ ಬಂಡಿಗಳನ್ನು ತೆಗೆದುಕೊಂಡುಹೋಗಿ, ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.


ಆಗ ನಾವು, ‘ಹೋಗುವುದಕ್ಕಾಗದು, ನಮ್ಮ ಚಿಕ್ಕ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಏಕೆಂದರೆ ನಮ್ಮ ಚಿಕ್ಕ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ, ಆ ಮನುಷ್ಯನ ಮುಖವನ್ನು ನಾವು ನೋಡುವುದಕ್ಕಾಗುವುದು,’ ಎಂದು ಹೇಳಿದೆವು.


ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.


ನಾವು ನಮ್ಮ ಒಡೆಯನಿಗೆ, ‘ನಮಗೆ ಮುದುಕನಾದ ತಂದೆಯೂ ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಚಿಕ್ಕ ಮಗನೂ ಇದ್ದಾನೆ, ಅವನ ಸಹೋದರನು ಸತ್ತುಹೋಗಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿಸುತ್ತಾನೆ,’ ಎಂದು ಹೇಳಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು