Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:1 - ಕನ್ನಡ ಸಮಕಾಲಿಕ ಅನುವಾದ

1 ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ, “ಈ ಮನುಷ್ಯರ ಚೀಲಗಳಲ್ಲಿ ಹೊರುವುದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ, ಪ್ರತಿಯೊಬ್ಬನ ಹಣವನ್ನು ಅವನವನ ಚೀಲದ ಬಾಯಲ್ಲಿ ಇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಜೋಸೆಫನು ತನ್ನ ಗೃಹನಿರ್ವಾಹಕನನ್ನು ಕರೆದು, “ಆ ಜನರ ಗೋಣಿಚೀಲಗಳಲ್ಲಿ ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಿಯಲ್ಲಿ ಅವನವನ ಹಣದ ಗಂಟನ್ನಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೋಸೇಫನು ತನ್ನ ಮನೆವಾರ್ತೆಯವನಿಗೆ - ಆ ಮನುಷ್ಯರ ಚೀಲಗಳಲ್ಲಿ ಹೊರುವಷ್ಟು ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದ ಬಾಯಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:1
8 ತಿಳಿವುಗಳ ಹೋಲಿಕೆ  

ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸಬೇಕೆಂದೂ, ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರುಗಿ ಇಡಬೇಕೆಂದೂ, ಪ್ರಯಾಣಕ್ಕಾಗಿ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು.


ಯೋಸೇಫನು ಬೆನ್ಯಾಮೀನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ, “ಈ ಮನುಷ್ಯರನ್ನು ಮನೆಗೆ ಕರೆದುಕೊಂಡು ಹೋಗಿ, ಮಾಂಸದ ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಮಧ್ಯಾಹ್ನದಲ್ಲಿ ನನ್ನ ಸಂಗಡ ಊಟಮಾಡಬೇಕು,” ಎಂದನು.


ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.


ಆಗ ಅವರು ಯೋಸೇಫನ ಮನೆಯ ಬಳಿಗೆ ಹೋಗಿ, ಬಾಗಿಲಿನ ಮುಂದೆ ಗೃಹನಿರ್ವಾಹಕನ ಸಂಗಡ ಮಾತನಾಡಿ,


ಅವರು ಈಜಿಪ್ಟಿನಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ, “ತಿರುಗಿ ಹೋಗಿ ನಮಗಾಗಿ ಸ್ವಲ್ಪ ಆಹಾರ ಕೊಂಡುಕೊಳ್ಳಿರಿ,” ಎಂದನು.


ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರಿಯ ಸೇವಕನಿಗೆ, “ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು,


ನನ್ನ ಬೆಳ್ಳಿಯ ಪಾತ್ರೆಯನ್ನು ಚಿಕ್ಕವನ ಚೀಲದ ಬಾಯಲ್ಲಿ ಅವನ ಧಾನ್ಯ ಹಾಗೂ ಹಣದ ಸಂಗಡ ಇಡು,” ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿದಂತೆಯೇ ಅವನು ಮಾಡಿದನು.


ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ, ಅವನವನ ಹಣದ ಗಂಟು, ಅವನವನ ಚೀಲದಲ್ಲಿ ಇತ್ತು. ಅವರೂ, ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು