Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಅವನು, “ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ, ಅವನು ನನಗೆ ದಾಸನಾಗಿರಲಿ, ಆದರೆ ನೀವು ನಿರಪರಾಧಿಗಳಾಗಿರುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಆ ಗೃಹನಿರ್ವಾಹಕ, “ಸರಿ, ನೀವು ಹೇಳಿದಂತೆಯೇ ಆಗಲಿ; ಆ ಪಾತ್ರೆ ಯಾವನ ಬಳಿ ಸಿಕ್ಕುತ್ತದೋ ಅವನು ನನಗೆ ಊಳಿಗದವನಾಗಬೇಕು; ಉಳಿದವರು ತಪ್ಪಿಲ್ಲದವರು,’ ಎಂದು ಹೇಳಿದ್ದೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಅವನು - ಒಳ್ಳೇದು, ನೀವು ಹೇಳಿದಂತೆ ಆಗಲಿ; ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ ಅವನು ನನಗೆ ದಾಸನಾಗಬೇಕು; ಉಳಿದವರು ತಪ್ಪಿಲ್ಲದವರು ಎಂದು ಹೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕನು, “ನೀವು ಹೇಳಿದಂತೆಯೇ ಆಗಲಿ. ಆದರೆ ನಾನು ಅವನನ್ನು ಕೊಲ್ಲುವುದಿಲ್ಲ. ಯಾರಲ್ಲಿ ಬೆಳ್ಳಿಯ ಬಟ್ಟಲು ಸಿಕ್ಕುತ್ತದೊ ಅವನು ನನ್ನ ಗುಲಾಮನಾಗಿರಬೇಕು; ಉಳಿದವರು ಹೋಗಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:10
6 ತಿಳಿವುಗಳ ಹೋಲಿಕೆ  

ಅವನು ಕಳ್ಳತನ ಮಾಡುವಾಗ ಸೂರ್ಯೋದಯವಾದರೆ, ಹೊಡೆದವನ ರಕ್ತ ಸುರಿಸಬೇಕು. “ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂದಿರುಗಿಸಬೇಕು. ಅವನಲ್ಲಿ ಕೊಡಲು ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.


“ಹಾಗಿದ್ದಲ್ಲಿ ಆ ಹುಡುಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು. ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.


ಆಗ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ, ಅವನು ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ,” ಎಂದನು.


ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವುದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು,” ಎಂದರು.


ಅದಕ್ಕೆ ಅವರು ತ್ವರೆಪಟ್ಟು, ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು