Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಯೋಸೇಫನು ಅವರಿಗೆ, “ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ಅವರನ್ನು, “ನೀವು ಮಾಡಿರುವ ಕೃತ್ಯ ಎಂಥದ್ದು! ನನ್ನಂಥವನು ಕಣಿ ನೋಡಿ ಗುಟ್ಟನ್ನು ರಟ್ಟು ಮಾಡಬಲ್ಲವನೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಅವನೆದುರಿಗೆ ಅಡ್ಡಬೀಳಲು ಯೋಸೇಫನು ಅವರನ್ನು - ನೀವು ಮಾಡಿರುವ ಈ ಕೃತ್ಯವು ಏನು! ನನ್ನಂಥವನು ಶಕುನ ನೋಡಿ ಗುಟ್ಟನ್ನು ಬಿಚ್ಚುವನೆಂಬದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೋಸೇಫನು ಅವರಿಗೆ, “ನೀವು ಹೀಗೇಕೆ ಮಾಡಿದಿರಿ? ನಾನು ಶಕುನ ನೋಡಿ ರಹಸ್ಯಗಳನ್ನು ತಿಳಿದುಕೊಳ್ಳಬಲ್ಲೆನೆಂಬುದು ನಿಮಗೆ ಗೊತ್ತಿರಲಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:15
7 ತಿಳಿವುಗಳ ಹೋಲಿಕೆ  

ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.


ಆದರೆ ಅವನು ಅದಕ್ಕೆ ಒಪ್ಪದೆ, ತನ್ನ ಯಜಮಾನನ ಹೆಂಡತಿಗೆ, “ನನ್ನ ಯಜಮಾನನು ತನ್ನ ಮನೆಯಲ್ಲಿರುವ ಯಾವುದರ ಬಗ್ಗೆಯೂ ಚಿಂತಿಸದೆ, ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.


ಅದಕ್ಕೆ ಅಬೀಮೆಲೆಕನು, “ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆ. ನೀನೂ ನನಗೆ ತಿಳಿಸಲಿಲ್ಲ. ನಾನು ಇಂದಿನವರೆಗೂ ಅದನ್ನು ಕೇಳಲೂ ಇಲ್ಲ,” ಎಂದನು.


ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.


ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.


ಯೆಹೂದನು, “ನಾವು ನಮ್ಮ ಒಡೆಯನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನೀತಿವಂತರಾಗಿ ಮಾಡಿಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಹೊರಪಡಿಸಿದ್ದಾರೆ. ನಾವೂ ಪಾತ್ರೆಯು ಯಾರ ಕೈಯಲ್ಲಿ ಸಿಕ್ಕಿತೋ ಅವನೂ ನನ್ನ ಒಡೆಯನಿಗೆ ದಾಸರಾಗಿದ್ದೇವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು