Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:16 - ಕನ್ನಡ ಸಮಕಾಲಿಕ ಅನುವಾದ

16 ಯೆಹೂದನು, “ನಾವು ನಮ್ಮ ಒಡೆಯನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನೀತಿವಂತರಾಗಿ ಮಾಡಿಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಹೊರಪಡಿಸಿದ್ದಾರೆ. ನಾವೂ ಪಾತ್ರೆಯು ಯಾರ ಕೈಯಲ್ಲಿ ಸಿಕ್ಕಿತೋ ಅವನೂ ನನ್ನ ಒಡೆಯನಿಗೆ ದಾಸರಾಗಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಯೆಹೂದನು, “ನಮ್ಮೊಡೆಯರಿಗೆ ನಾವು ಏನು ಹೇಳೋಣ? ಯಾವ ಉತ್ತರ ಕೊಡೋಣ? ನಾವು ನಿರ್ದೋಷಿಗಳೆಂದು ತೋರಿಸಲು, ಏನುತಾನೆ ಮಾಡುವುದು? ನಿಮ್ಮ ಸೇವಕರಾದ ನಮ್ಮ ಪಾಪಕೃತ್ಯವನ್ನು ದೇವರೇ ಹೊರಪಡಿಸಿದ್ದಾರೆ. ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಗುಲಾಮರಾದೆವಲ್ಲವೆ?" ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮಗೆ ತಿಳಿಯಲಿಲ್ಲವೋ ಎಂದು ಕೇಳಲು ಯೆಹೂದನು - ನಾವು ನಮ್ಮ ಸ್ವಾವಿುಗೆ ಏನು ಹೇಳೋಣ? ನಾವು ಹೇಗೆ ಮಾತಾಡೇವು? ನಾವು ನಿರ್ದೋಷಿಗಳಾಗಿ ತೋರುವಂತೆ ಏನು ಮಾಡಬೇಕು? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ಗುಲಾಮರಾದೆವಲ್ಲವೇ ಅನ್ನಲು ಯೋಸೇಫನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೂದನು, “ಸ್ವಾಮಿ, ನಾವು ಹೇಳುವಂಥದ್ದು ಏನೂ ಇಲ್ಲ; ವಿವರಿಸಲು ಯಾವ ದಾರಿಯೂ ಇಲ್ಲ; ನಾವು ತಪ್ಪಿತಸ್ಥರಲ್ಲವೆಂದು ತೋರಿಸಲು ಯಾವ ಮಾರ್ಗವೂ ಇಲ್ಲ. ನಾವು ಮಾಡಿದ ಬೇರೊಂದು ಕಾರ್ಯದ ನಿಮಿತ್ತ ದೇವರು ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿದ್ದಾನೆ. ಆದ್ದರಿಂದ ನಾವೆಲ್ಲರೂ ಬೆನ್ಯಾಮೀನನೂ ನಿನಗೆ ಗುಲಾಮರಾಗಿರುವೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:16
25 ತಿಳಿವುಗಳ ಹೋಲಿಕೆ  

ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವುದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು,” ಎಂದರು.


“ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.


ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.


“ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.


ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


“ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷಿ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.


ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.


“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.


ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರೇ, ನೀವು ನೀತಿವಂತರು! ನಾವು ಇಂದು ತಪ್ಪಿಸಿಕೊಂಡು ಉಳಿದಿದ್ದೇವೆ. ನಾವು ನಮ್ಮ ಅಪರಾಧಗಳ ನಿಮಿತ್ತ ನಿಮ್ಮ ಮುಂದೆ ನಿಲ್ಲಲು ಯೋಗ್ಯರಲ್ಲದಿದ್ದರೂ, ನಮ್ಮ ಅಪರಾಧಗಳೊಂದಿಗೆ ನಿಮ್ಮ ಮುಂದೆ ನಿಂತಿದ್ದೇವೆ,” ಎಂದು ಪ್ರಾರ್ಥನೆಮಾಡಿದೆ.


“ಆದರೆ ಈಗ ನಮ್ಮ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ನಿಮ್ಮ ಆಜ್ಞೆಗಳನ್ನು ನಾವು ತೊರೆದಿದ್ದೇವೆ.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


ಅವನ ಕುಟುಂಬಗಳು ಕುಟುಂಬಗಳಾಗಿ, ವ್ಯಕ್ತಿಗಳು ವ್ಯಕ್ತಿಗಳಾಗಿ ಬಂದಾಗ, ಜಿಮ್ರಿಯ ಮಗನಾದ ಕರ್ಮೀಯ ಮಗನಾದ ಆಕಾನನೂ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಸಿಕ್ಕಿದನು.


ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.


ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.


ಏಕೆಂದರೆ ನಿನ್ನ ದಾಸನಾದ ನಾನು, ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆಯಾಗಿ, ‘ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆನು,’ ಎಂದು ಹೇಳಿಕೊಂಡಿದ್ದೇನೆ.


ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ, “ಇನ್ನೊಂದು ಕನಸನ್ನು ಕಂಡಿದ್ದೇನೆ. ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದನು.


ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.


ಆಗ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ, ಅವನು ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ,” ಎಂದನು.


ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು