ಆದಿಕಾಂಡ 44:20 - ಕನ್ನಡ ಸಮಕಾಲಿಕ ಅನುವಾದ20 ನಾವು ನಮ್ಮ ಒಡೆಯನಿಗೆ, ‘ನಮಗೆ ಮುದುಕನಾದ ತಂದೆಯೂ ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಚಿಕ್ಕ ಮಗನೂ ಇದ್ದಾನೆ, ಅವನ ಸಹೋದರನು ಸತ್ತುಹೋಗಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿಸುತ್ತಾನೆ,’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾವು ‘ತಂದೆ ಇದ್ದಾರೆ, ಅವರು ಮುದುಕ; ಮುಪ್ಪಿನಲ್ಲಿ ಅವರಿಗೆ ಹುಟ್ಟಿದ ಒಬ್ಬ ಚಿಕ್ಕ ಹುಡುಗ ಇದ್ದಾನೆ. ಅವನ ಒಡಹುಟ್ಟಿದವನು ಸತ್ತುಹೋದ. ಅವನ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಲ್ಲಿ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಅಪಾರ ಪ್ರೀತಿ,’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ತಂದೆಯಿದ್ದಾನೆ, ಅವನು ಮುದುಕನು; ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಹುಡುಗನೂ ಇದ್ದಾನೆ. ಅವನ ಒಡಹುಟ್ಟಿದವನು ಸತ್ತು ಹೋದನು; ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ, ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು ಎಂದು ಹೇಳಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾವು ನಿಮಗೆ, ‘ನಮಗೆ ಒಬ್ಬ ತಂದೆಯಿದ್ದಾನೆ, ಅವನು ವೃದ್ಧನಾಗಿದ್ದಾನೆ; ನಮಗೆ ಪ್ರಾಯದ ತಮ್ಮನಿದ್ದಾನೆ, ನಮ್ಮ ತಂದೆಗೆ ತುಂಬ ವಯಸ್ಸಾಗಿದ್ದಾಗ ಅವನು ಹುಟ್ಟಿದ್ದರಿಂದ ನಮ್ಮ ತಂದೆಯು ಅವನನ್ನು ಪ್ರೀತಿಸುತ್ತಾನೆ. ಆ ಕಿರಿಯ ಮಗನ ಸಹೋದರನು ಸತ್ತುಹೋದನು. ಆದ್ದರಿಂದ ಆ ತಾಯಿಯಲ್ಲಿ ಹುಟ್ಟಿದವರಲ್ಲಿ ಇವನೊಬ್ಬನೇ ಉಳಿದಿದ್ದಾನೆ. ನಮ್ಮ ತಂದೆಯು ಅವನನ್ನು ತುಂಬಾ ಪ್ರೀತಿಸುವನು’ ಎಂದು ಹೇಳಿದೆವು. ಅಧ್ಯಾಯವನ್ನು ನೋಡಿ |