Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:28 - ಕನ್ನಡ ಸಮಕಾಲಿಕ ಅನುವಾದ

28 ಒಬ್ಬನು ನನ್ನ ಬಳಿಯಿಂದ ಹೋಗಿ ಬಿಟ್ಟನು. “ಅವನು ನಿಶ್ಚಯವಾಗಿ ಕಾಡುಮೃಗದಿಂದ ಸೀಳಿ ಸತ್ತಿರಬೇಕು,” ಎಂದು ಹೇಳಿದಿರಿ. ಅವನನ್ನು ನಾನು ಈ ದಿನದವರೆಗೂ ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರಲ್ಲಿ ಒಬ್ಬನು ನನ್ನನ್ನು ಬಿಟ್ಟು ಹೊರಟುಹೋದ; ಅವನು ನಿಸ್ಸಂದೇಹವಾಗಿ ಕಾಡುಮೃಗದಿಂದ ಸೀಳಿಹಾಕಲ್ಪಟ್ಟಿರಬೇಕು ಎಂದು ತಿಳಿದುಕೊಂಡೆ; ಅಂದಿನಿಂದ ಅವನನ್ನು ನಾನು ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟುಹೋದನು; ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿಹಾಕಲ್ಪಟ್ಟಿರಬೇಕೆಂದು ತಿಳುಕೊಂಡೆನು; ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ಒಬ್ಬ ಮಗನನ್ನು ಕಳುಹಿಸಿಕೊಟ್ಟಾಗ, ಅವನು ಕ್ರೂರ ಪ್ರಾಣಿಯಿಂದ ಕೊಲ್ಲಲ್ಪಟ್ಟನು; ಇಂದಿನ ತನಕ ನಾನು ಅವನನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:28
5 ತಿಳಿವುಗಳ ಹೋಲಿಕೆ  

ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು.


ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.


ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.


ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು, ಒಂದು ಹೋತವನ್ನು ಕೊಯ್ದು, ಆ ಅಂಗಿಯನ್ನು ರಕ್ತದಲ್ಲಿ ಅದ್ದಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು