ಆದಿಕಾಂಡ 44:4 - ಕನ್ನಡ ಸಮಕಾಲಿಕ ಅನುವಾದ4 ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವುದಕ್ಕಿಂತ ಮುಂಚೆ ಯೋಸೇಫನು ಮನೆಯ ಗೃಹನಿರ್ವಾಹಕನಿಗೆ, “ಆ ಮನುಷ್ಯರ ಹಿಂದೆ ಹೋಗು. ಅವರು ಸಿಕ್ಕಿದಾಗ, ‘ಏಕೆ ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಿದಿರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ಪಟ್ಟಣಗಳನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ, ಜೋಸೆಫನು ತನ್ನ ಗೃಹನಿರ್ವಾಹಕನಿಗೆ, ‘ನೀನೆದ್ದು ಆ ಜನರನ್ನು ಹಿಂದಟ್ಟಿ ಹೋಗಿ ಹಿಡಿ. ಅವರಿಗೆ, ‘ನೀವು ಉಪಕಾರಕ್ಕೆ ಪ್ರತಿಯಾಗಿ ಏಕೆ ಅಪಕಾರ ಮಾಡಿದಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ ಯೋಸೇಫನು ತನ್ನ ಮನೆವಾರ್ತೆಯವನಿಗೆ - ನೀನೆದ್ದು ಆ ಮನುಷ್ಯರನ್ನು ಹಿಂದಟ್ಟಿ ಸಂಧಿಸಿ - ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ? ಅಧ್ಯಾಯವನ್ನು ನೋಡಿ |