Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:5 - ಕನ್ನಡ ಸಮಕಾಲಿಕ ಅನುವಾದ

5 ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ” ಎಂದು ಅವರಿಗೆ ಹೇಳು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಪಾತ್ರೆಯಿಂದಲೆ ಅಲ್ಲವೆ ನನ್ನ ದಣಿ ಪಾನಮಾಡುವುದು? ಅದರಲ್ಲಿ ನೋಡೇ ಅಲ್ಲವೆ ಶಕುನ ಹೇಳುವುದು? ನೀವು ಮಾಡಿರುವುದು ಮಹಾ ನೀಚತನ, ಎನ್ನಬೇಕು,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ. ಅದರಲ್ಲಿ ನೋಡಿ ಶಕುನ ಹೇಳುವದಿಲ್ಲವೇ. ನೀವು ಮಾಡಿದ್ದು ಬಹಳ ಕೆಟ್ಟದ್ದು ಅನ್ನಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ’ ಎಂದು ಹೇಳು” ಎಂಬುದಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:5
7 ತಿಳಿವುಗಳ ಹೋಲಿಕೆ  

ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


“ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.


ಆಗ ಯೋಸೇಫನು ಅವರಿಗೆ, “ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದನು.


ಆದರೆ ಆ ಮನುಷ್ಯರು ಈ ಮಾತನ್ನು ಶುಭಸೂಚನೆಯಾಗಿ ನೆನಸಿ, ಅವನ ಮಾತಿಗೆ ಉತ್ತರವಾಗಿ, “ನಿನ್ನ ಸಹೋದರನಾದ ಬೆನ್ಹದದನು ಇದ್ದಾನೆ,” ಎಂದು ಹೇಳಿದರು. ಆಗ ಅಹಾಬನು, “ನೀವು ಹೋಗಿ ಅವನನ್ನು ಕರೆದುಕೊಂಡು ಬನ್ನಿರಿ,” ಎಂದನು. ಬೆನ್ಹದದನು ಅವನ ಬಳಿಗೆ ಹೊರಟುಬಂದಾಗ ಅಹಾಬನು ಅವನನ್ನು ರಥದಲ್ಲಿ ಕುಳ್ಳಿರಿಸಿಕೊಂಡನು.


ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು