Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಅವರು ಅವನಿಗೆ, “ನಮ್ಮ ಒಡೆಯನು ಏಕೆ ಇಂಥ ಮಾತುಗಳನ್ನಾಡುತ್ತಾನೆ? ನಿನ್ನ ದಾಸರು ಹೀಗೆ ಮಾಡುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಅವನಿಗೆ, “ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಅವರು, “ಅಯ್ಯಾ, ನೀವು ಇಂಥಾ ಮಾತುಗಳನ್ನು ಆಡಬಹುದೆ! ನಿಮ್ಮ ಸೇವಕರಾದ ನಾವು ಇಂಥ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಅವನಿಗೆ - ನಮ್ಮ ಸ್ವಾವಿುಯು ಇಂಥಾ ಮಾತುಗಳನ್ನು ಹೇಳುವದೇನು! ನಿನ್ನ ಸೇವಕರು ಇಂಥ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಸಹೋದರರು ಸೇವಕನಿಗೆ, “ರಾಜ್ಯಪಾಲನು ಈ ರೀತಿ ಹೇಳುವುದೇಕೆ? ನಾವು ಇಂಥಾ ಕೃತ್ಯವನ್ನು ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:7
12 ತಿಳಿವುಗಳ ಹೋಲಿಕೆ  

ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ.


ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.


ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.


ಆದರೆ ಹಜಾಯೇಲನು, “ನಿಮ್ಮ ಸೇವಕನು ಕೇವಲ ನಾಯಿ, ಇಂಥಾ ಮಹಾ ಕೆಲಸವನ್ನು ಮಾಡುವುದಕ್ಕೆ ಹೇಗೆ ಸಾಧ್ಯ?” ಎಂದನು. ಎಲೀಷನು, “ನೀನು ಅರಾಮಿನ ಮೇಲೆ ಅರಸನಾಗುವೆ ಎಂದು ಯೆಹೋವ ದೇವರು ನನಗೆ ತಿಳಿಸಿದ್ದಾರೆ,” ಎಂದನು.


ಅದಕ್ಕೆ ಯೋವಾಬನು ಉತ್ತರವಾಗಿ, “ನಾನು ಅದನ್ನು ಎಂದಿಗೂ ಮಾಡುವುದಿಲ್ಲ. ನುಂಗುವುದನ್ನೂ ಹಾಳುಮಾಡುವುದನ್ನೂ ನಾನು ಎಂದಿಗೂ ಮಾಡುವುದಿಲ್ಲ.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.


ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.


ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವುದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು